ಮಧುಗಿರಿ:
ಗಣರಾಜ್ಯೋತ್ಸವದಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಮಾಡಲು ಸರ್ಕಾರ ಆದೇಶ ನೀಡಿದೆ, ಹಾಗೂ ಧ್ವಜಾರೋಹಣದ ವೇಳೆ ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಭಾವಚಿತ್ರ ಇಟ್ಟು ಧ್ವಜಾರೋಹಣ ಮಾಡಲಾಗುತ್ತದೆ. ಆದರೆ ಕೆಲವೊಂದು ಕಡೆ ಧ್ವಜಾರೋಹಣ ವೇಳೆ ಅನೇಕ ಯಡವಟ್ಟುಗಳು ನಡೆಯುತ್ತವೆ. ಅದರಂತೆ ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಕೊಡ್ಲಾಪುರ ಗ್ರಾಮ ಪಂಚಾಯತಿಯಲ್ಲಿ ಧ್ವಜಾರೋಹಣದ ವೇಳೆ ಅಂಬೇಡ್ಕರ್ಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿದ್ದು, ಈ ಬಗ್ಗೆ ತಹಶೀಲ್ದಾರ್ ಕ್ರಮ ಕೈಗೊಂಡಿದ್ದಾರೆ.
ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಕೊಡ್ಲಾಪುರ ಗ್ರಾಮ ಪಂಚಾಯತಿಯಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ಆಚರಿಸಲಾಯಿತು. ಸರ್ಕಾರಿ ಹಬ್ಬಗಳಂದು ಸರ್ಕಾರಿ ನೌಕರರು ಯಾವುದೇ ಕಾರಣಕ್ಕೂ ರಜೆ ಹಾಕಬಾರದು ಎಂಬ ನಿಯಮ ಇರುತ್ತೆ, ಆದರೆ ಕೊಡ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ಗಣರಾಜ್ಯೋತ್ಸವದಂದು ಪಿಡಿಒ ನಾಗಮಣಿ ರಜೆ ಹಾಕಿದ್ದು, ಸರ್ಕಾರಿ ಕಾರ್ಯಕ್ರಮಕ್ಕೆ ಗೈರಾಗಿದ್ದರು, ಅಲ್ಲದೇ ಪಿಡಿಓ ಅನುಪಸ್ಥಿತಿಯಲ್ಲಿ ಗ್ರೆಡ್ 2 ಕಾರ್ಯದರ್ಶಿ ವಿನೋದ್ ಕುಮಾರ್ ನೇತೃತ್ವದಲ್ಲಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗಿತ್ತು. ಅಂದಿನ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಫೋಟೋ ಇಟ್ಟಿದ್ದು, ಅಂಬೇಡ್ಕರ್ ಭಾವಚಿತ್ರವನ್ನು ಇಡದೇ ಅಪಮಾನ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಮಧುಗಿರಿ ತಹಶೀಲ್ದಾರ್ ಕ್ರಮ ಕೈಗೊಂಡಿದ್ದಾರೆ.
ಇನ್ನು ಸರ್ಕಾರಿ ಕಾರ್ಯಕ್ರಮಕ್ಕೆ ಗೈರಾದ ಪಿಡಿಒ ನಾಗಮಣಿಯನ್ನು ಹಾಗೂ ಅಂಬೇಡ್ಕರ್ಗೆ ಅಪಮಾನಿಸಿದ್ದಾರೆ ಎಂದು ಆರೋಪಿಸಿ ಗ್ರೆಡ್ 2 ಕಾರ್ಯದರ್ಶಿ ವಿನೋದ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.