ಮಧುಗಿರಿ ಪೊಲೀಸ್ ಠಾಣೆಯ ಪಿಎಸ್ಐ ಜೆ. ಮುತ್ತುರಾಜ್ ನೇತೃತ್ವತುಮಕೂರು
ಮಧುಗಿರಿ :
ತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಂತರ್ ರಾಜ್ಯ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳೆದ ಒಂದೂವರೆ ತಿಂಗಳ ಹಿಂದೆ ಪಾವಗಡ ಹಾಗೂ ತುಮಕೂರು ನಗರದಲ್ಲಿ ಅಂತರ್ ರಾಜ್ಯ ಕಳ್ಳರು ಹೈಟೆಕ್ ಬೈಕ್ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡಿದ್ದು, ಖದೀಮರನ್ನು ಬಂಧಿಸಿ ಬೈಕ್ಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಮಧುಗಿರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ್ದು ಸುಮಾರು 20 ಲಕ್ಷ ಮೌಲ್ಯದ 19 ಬೈಕ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಮಧುಗಿರಿ ಪಟ್ಟಣದ ಬೈಪಾಸ್ ಬಳಿಯ ಕೊಡಿಗೇನಹಳ್ಳಿ ಜಂಕ್ಷನ್ ಸಮೀಪ ಪಿಎಸ್ಐ ಜೆ. ಮುತ್ತುರಾಜ್ ನೇತೃತ್ವದಲ್ಲಿ ಗಸ್ತು ತಿರುಗುತ್ತಿದ್ದಾಗ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಅಂತರ್ ರಾಜ್ಯದವರನ್ನು ಬಂಧಿಸಿ ವಿಚಾರಣೆ ನಡಿಸಿದಾಗ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ರೊದ್ಧಕಂಪಲ್ಲಿಯ ನರಸಿಂಹಮೂರ್ತಿ, ಸುರೇಶ್ ಹಾಗೂ ಬೋಯಾ ನರೇಶ್ ಎಂಬುವವರು ಬಂಧಿತರಾಗಿದ್ದು, ಆರೋಪಿಗಳಿಂದ 10 ಲಕ್ಷ ಮೌಲ್ಯದ 19 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಇನ್ನು ಬಂಧಿತ ಆರೋಪಿಗಳು ಪಾವಗಡ, ಗೌರಿಬಿದನೂರು, ಹಿಂದೂಪುರ, ಪೆನಗೊಂಡ, ಮಡಕಶಿರಾ ಪಟ್ಟಣಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳುವು ಮಾಡಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.