ಮಧುಗಿರಿ:
ದರ ಏರಿಕೆ ಖಂಡಿಸಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸ್ತಾ ಇದ್ದಾರೆ. ಇತ್ತ ಮಧುಗಿರಿ ಪಟ್ಟಣದಲ್ಲೂ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಮಧುಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು. ಬಳಿಕ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮಧುಗಿರಿ ಪಟ್ಟಣದ ಬಿಜೆಪಿ ಮಂಡಲ ಅಧ್ಯಕ್ಷ ಹನುಮಂತ ರೆಡ್ಡಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಗ್ಯಾರಂಟಿಗಳ ರಾಜ್ಯದ ಜನರ ನೆಮ್ಮದಿಯನ್ನು ಕಸಿದುಕೊಳ್ಳುತ್ತದೆ. ಇದರಿಂದ ಇಡೀ ರಾಜ್ಯದ ಜನತೆ ಬಳಲುವಂತಾಗಿದೆ. ಆದ್ದರಿಂದ ಇಡೀ ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರವು ಜನರಿಗೆ ಹೊರೆಯಾಗುತ್ತಿದ್ದು ಲೂಟಿಕೋರ ಕಾಂಗ್ರೆಸ್ ಸರ್ಕಾರಕ್ಕೆ ಈ ಕೂಡಲೇ ಈ ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಬೇಕು ಎಂದು ಅಗ್ರಹಿಸುತ್ತೇವೆ ಎಂದು ತಿಳಿಸಿದರು.