ಮಧುಗಿರಿತುಮಕೂರು
ತುಮಕೂರು : ಮಧುಗಿರಿ ಪಟ್ಟಣದ ವಾರ್ಡ್‌ಗಳಲ್ಲಿ ದಿನದಿಂದ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಬೀದಿಯಲ್ಲಿ ಓಡಾಡಲು ಜನರು ಹೆದರುವಂತಾಗಿದೆ. ಮಧುಗಿರಿ ಪಟ್ಟಣದಲ್ಲಿ ಕಳೆದ ಎರಡು ಮೂರು ದಿನಗಳ ಹಿಂದೆ ಶಾಲೆ ಮುಗಿಸಿ ಬರುತ್ತಿದ್ದ ಬಾಲಕಿಯ ಮೇಲೆ ನಾಯಿಗಳು ಅಟ್ಯಾಕ್ ಮಾಡಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಕರಡೀಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಾಂಗ ಮಾಡ್ತಿದ್ದ ಬಾಲಕಿ ಮೇಲೆ ಶ್ವಾನಗಳು ಎರಗಿದ್ದು, ಆಕೆ ಕಿರುಚಾಡುವುದನ್ನು ಕಂಡು ಅಕ್ಕ ಪಕ್ಕದ ನಿವಾಸಿಗಳು ಬಾಲಕಿಯನ್ನು ನಾಯಿಯಿಂದ ರಕ್ಷಣೆ ಮಾಡಿದ್ದಾರೆ. ಬಳಿಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದಲ್ಲದೇ ನಿತ್ಯ ರಸ್ತೆಯಲ್ಲಿ ಓಡಾಡಿಕೊಂಡು ಹೋಗುತ್ತಿರುವವರ, ಬೈಕ್‌ನಲ್ಲಿ ಹೋಗುತ್ತೀರುವವರ ಮೇಲೆ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಹೋಗುತ್ತಿವೆ. ಹಾಗೂ ಅನೇಕ ಜನರ ಮೇಲೆ ನಾಯಿ ದಾಳಿ ಮಾಡಿದ್ದು ಸಾಕಷ್ಟು ಮಂದಿ ಆಸ್ಪತ್ರೆ ಪಾಲಾಗುತ್ತಿದ್ದಾರೆ. ಹೀಗಿದ್ರು ಕೂಡ ಅಧಿಕಾರಿಗಳು ಮಾತ್ರ ನಾಯಿಗಳ ಹಾವಳಿಗೆ ಬ್ರೇಕ್ ಹಾಕುವ ಕೆಲಸ ಮಾತ್ರ ಮಾಡ್ತಾ ಇಲ್ಲ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.
ನಾಯಿಗಳ ದಾಳಿಯಿಂದಾಗಿ ಮಕ್ಕಳು, ವೃದ್ಧರು ಓಡಾಡಲು ಭಯ ಪಡ್ತಾ ಇದ್ದು, ರಕ್ಷಣೆಗೆ ಕೈಯಲ್ಲಿ ಕೋಲನ್ನು ಹಿಡಿದುಕೊಂಡು ಹೋಗಬೇಕಾದ ಸ್ಥಿತಿ ಉಂಟಾಗಿದೆ. ನಾಯಿ ಹಾವಳಿಯಿಂದ ನಿವಾಸಿಗಳನ್ನು ರಕ್ಷಣೆ ಮಾಡುವಂತೆ ಪುರಸಭೆ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ, ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ