ಮಧುಗಿರಿ :
ಜನರ ನಾಡಿಮಿಡಿತದಂತೆ ಕೆಲಸ ಮಾಡುತ್ತಿರುವ ನಿಮ್ಮ ಪ್ರಜಾಶಕ್ತಿ ಟಿವಿ ಗಲ್ಲಿ-ಗಲ್ಲಿಗೆ, ಹಳ್ಳಿ-ಹಳ್ಳಿಗಳಿಗೆ ತೆರಳಿ ಅಲ್ಲಿನ ಜನರ ಸಮಸ್ಯೆಗಳನ್ನು ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನ ಸೆಳೆಯುತ್ತಿದೆ. ವರದಿ ಬಿತ್ತರವಾದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿದ್ದು, ಜನರ ಸಮಸ್ಯೆಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಮಧುಗಿರಿ ಪಟ್ಟಣದಲ್ಲಿನ ಅವ್ಯವಸ್ಥೆಯ ಬಗ್ಗೆಯೂ ನಿಮ್ಮ ಪ್ರಜಾಶಕ್ತಿ ಟಿವಿ ವರದಿ ಮಾಡಿತ್ತು. ಪ್ರಜಾಶಕ್ತಿ ವರದಿ ಬೆನ್ನಲ್ಲೇ ಮಧುಗಿರಿ ಪಟ್ಟಣ ಪಂಚಾಯ್ತಿಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಕೆಲಸ ಮಾಡಿದ್ದಾರೆ.
ಮಧುಗಿರಿ ಪಟ್ಟಣದಲ್ಲಿರುವ ತಾಲೂಕು ಪಂಚಾಯಿತಿ ಮುಂಭಾಗ ಹಾಗೂ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿರುವ ಶೌಚಾಲಯಕ್ಕೆ ಬೀಗ ಜಡಿಯಲಾಗಿತ್ತು. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿಸಲಾಗಿದ್ದ ಶೌಚಾಲಯಗಳು ಯಾವುದೇ ಪ್ರಯೋಜನಕ್ಕೆ ಬಾರದೇ ಹಾಳಾಗ್ತಾ ಇದ್ವು. ಈ ಬಗ್ಗೆ ನಿಮ್ಮ ಪ್ರಜಾಶಕ್ತಿ ಟಿವಿ ಇದೇ ಮಾರ್ಚ್ 5 ರಂದು ಸುದ್ದಿಯನ್ನು ಬಿತ್ತರಿಸಿತ್ತು. ಸುದ್ದಿ ಬಿತ್ತರವಾಗ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು ತುರ್ತು ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿದ್ದಾರೆ.
ಪುರಸಭೆ ವತಿಯಿಂದ ಸಾವರ್ಜನಿಕರಿಗೆ ಅನುಕೂಲವಾಗಲೆಂದು ತಾಲೂಕು ಪಂಚಾಯ್ತಿ ಮುಂಭಾಗ ಶೌಚಾಲಯ ನಿರ್ಮಾಣ ಮಾಡಲಾಗಿತ್ತು. ಆದ್ರೆ ಈ ಶೌಚಾಯಲಕ್ಕೆ ಬೀಗ ಜಡಿಯಲಾಗಿದ್ದರಿಂದ ಸಾರ್ವಜನಿಕರು ಮೂತ್ರವಿಸರ್ಜನೆಗೆ ಪರದಾಡುವಂತಾಗಿತ್ತು. ಇತ್ತ ಶಾಲಾ ಕಾಲೇಜು ಮಕ್ಕಳಿಗೆ ಅನುಕೂಲವಾಗಲೆಂದು ರಾಜೀವ್ ಗಾಂಧಿ ಕ್ರೀಡಾಂಗಣದ ಸಮೀಪದಲ್ಲಿ ಪುರಸಭೆ ವತಿಯಿಂದ ಶೌಚಾಲಯ ನಿರ್ಮಾಣ ಮಾಡಿದ್ದು, ಅದು ಕೂಡ ಬಳಕೆಗೆ ಯೋಗ್ಯವಾಗದೇ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿತ್ತು. ಆದ್ರೆ ಇದೀಗ ಈ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಪುರಸಭೆ ಅಧ್ಯಕ್ಷ ಲಾಲಾಪೇಟೆ ಮಂಜುನಾಥ್ ನೇತೃತ್ವದಲ್ಲಿ ಎರಡೂ ಶೌಚಾಲಯಗಳನ್ನು ಸ್ವಚ್ಚತೆ ಮಾಡಿದ್ದು, ಸಾರ್ವಜನಿಕರ ಬಳಕೆಗೆ ಪೇ ಅಂಡ್ ಯುಸ್ ಮಾದರಿಯಲ್ಲಿ ಬಳಕೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಒಟ್ಟಿನಲ್ಲಿ ಪ್ರಜಾಶಕ್ತಿ ವರದಿಗೆ ಫಲಶೃತಿ ಸಿಕ್ಕಂತಾಗಿದ್ದು, ಶೌಚಾಲಯಗಳು ಸಾರ್ವಜನಿಕರ ಬಳಕೆಗೆ ಮುಕ್ತವಾಗಿವೆ.