ಮಧುಗಿರಿ : ದ್ವಿಚಕ್ರ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಮಧುಗಿರಿ ಪಟ್ಟಣದ ಬೈಪಾಸ್ ನಲ್ಲಿದೆ ನಡೆದಿದೆ. ಮಧುಗಿರಿ ಜಿಲ್ಲೆಯ ಮಾರಿಬೀಳು ಗ್ರಾಮದ ನಿವಾಸಿ ಮಂಜುನಾಥ್ (55) ಎಂಬುವರು ಮೃತ ದುರ್ದೈವಿಯಾಗಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಬಿಜವರ ಗ್ರಾಮಕ್ಕೆ ಹೋಗಿ ವಾಪಸ್ ಮಾರಿಬೀಳು ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಮಧುಗಿರಿ ಪಿಎಸ್ ಐ ವಿಜಿ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದು, ಮಂಜುನಾಥ್ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.