ಮಧುಗಿರಿ :
ಶುದ್ಧ ನೀರಿನ ಘಟಕದಿಂದ ಹೊರಬರುವ ವೇಸ್ಟೆಜ್ ನೀರು ರಸ್ತೆ ಮೇಲೆಯೇ ಹರಿಯುತ್ತಿದ್ದು, ರಸ್ತೆ ಕೊಚ್ಚೆಯಂತಾಗಿ ಇಲ್ಲಿಯೇ ಓಡಾಡುವ ಗ್ರಾಮಸ್ಥರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದರೆ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಮಾತ್ರ ಕ್ಯಾರೆ ಅನ್ನುತ್ತಿಲ್ಲ.
ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ದೊಡ್ಡಮಾಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಸಾರ್ವಜನಿಕ ಗ್ರಂಥಾಲಯ ಹಾಗೂ ಶುದ್ದ ಕುಡಿಯುವ ನೀರಿನ ಘಟಕ ಒಂದರ ಪಕ್ಕದಲ್ಲಿ ಒಂದು ಇದ್ದು, ಇಲ್ಲಿನ ಶುದ್ದ ಕುಡಿಯುವ ನೀರಿನ ಘಟಕದ ವೇಸ್ಟೆಜ್ ನೀರು ರಸ್ತೆ ಮೇಲೆ ಹರಿಯುತಿದೆ.
ಇನ್ನು ದಿನನಿತ್ಯ ಆರೋಗ್ಯ ಕೇಂದ್ರಕ್ಕೆ ಹಿರಿಯರು, ಮಕ್ಕಳು, ಗರ್ಭಿಣಿ ಮಹಿಳೆಯರು ಬರುತ್ತಾರೆ. ರಸ್ತೆಯಲ್ಲಿ ನೀರು ನಿಂತಿರುವುದರಿಂದ ಸೊಳ್ಳೆಗಳ ಆವಾಸ್ತಾನವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಗ್ರಾಮಸ್ಥರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳೂ ಕೂಡಲೇ ಇತ್ತ ಗಮನಹರಿಸಿ ಗ್ರಾಮಸ್ಥರ ಆರೋಗ್ಯವನ್ನು ಕಾಪಾಡಬೇಕಿದೆ.