KALABURAGI : ಹಳೇ ದ್ವೇಷಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

KALABURAGI NEWS : ಕಲಬುರಗಿ ಜಿಲ್ಲೆಯ ಫಿರೋಜಾಬಾದ್ [Firozabad] ಹೊರವಲಯದ ನಡು ರಸ್ತೆಯಲ್ಲಿ ಹಳೇ ದ್ವೇಷದ ಹಿನ್ನಲೆಯಲ್ಲಿ ಅತಿಕ್ರೂರವಾಗಿ ನಿಜಾಮುದ್ದೀನ್ ಬಾವರ್ಚಿ ಎಂಬ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ [Murder] ಮಾಡಲಾಗಿದೆ.

ಮೃತರಾದ ನಿಜಾಮುದ್ದೀನ್ ಬಾವರ್ಚಿ [Nizamuddin Bawarchi] ಅವರು ಕಲಬುರಗಿಯ King palace holl ಹತ್ತಿರದ ನಿವಾಸಿಯಾಗಿದ್ದು, ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದರು. ಈ ಬಾರಿಯಲ್ಲಿಯೂ ಹಳೇ ದ್ವೇಷವೇ ಕೊಲೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸ್ಥಳದಲ್ಲಿ ಬರ್ಬರ ಹತ್ಯೆ ನಡೆದಿರುವ ಶಂಕೆಯೂ ವ್ಯಕ್ತವಾಗಿದೆ.

ಇನ್ನು ಈ ಪ್ರಕರಣ ಸಂಬಂಧ ಫರ್ತಾಬಾದ್ [Farthabad] ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅತಿ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲು ಪೊಲೀಸರು ತೀವ್ರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

Author:

...
Keerthana J

Copy Editor

prajashakthi tv

share
No Reviews