ಮಂಡ್ಯ: ಈಜಲು ತೆರಳಿದ್ದ ವ್ಯಕ್ತಿ ಕಾವೇರಿ ನದಿಯಲ್ಲಿ ಮುಳುಗಿ ಸಾವು

ಮಂಡ್ಯ: 

ಕಾವೇರಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವೀಗೀಡಾಗಿರು ಘಟನೆ ಮಂಡ್ಯ  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ಮೂಲದ ಮಹೇಶ್ (35) ಎಂಬುವವರೇ ಸಾವೀಗೀಡಾದವರು.

ಶ್ರೀರಂಗಪ ಟ್ಟಣದ ತರೀಪುರ ಗ್ರಾಮದಲ್ಲಿ ಸ್ನೇಹಿತನ ಮನೆಯ ಗೃಹ ಪ್ರವೇಶಕ್ಕೆಂದು ಮಹೇಶ್ ಸ್ನೇಹಿತರ ಜೊತೆ ಬಂದಿದ್ದರು. ಬೆಳಗ್ಗೆ ನದಿಯಲ್ಲಿ ಸ್ನೇಹಿತರ ಜೊತೆ ಸ್ನಾನಕ್ಕೆಂದು ನದಿಗೆ ಈಜಲು ಹೋಗಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿ ಮಹೇಶ್ ಸಾವನ್ನಪ್ಪಿದ್ದಾರೆ. ಇನ್ನು ಈ ಪ್ರಕರಣ ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

 

Author:

share
No Reviews