ಕಲಬುರಗಿ:
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರವಕ ಘಟನೆ ಕಲುಬರುಗಿ ನಗರದ ಗಾಬರೆ ಲೇಔಟ್ ಅಪಾರ್ಟ್ಮೆಂಟ್‌ವೊಂದರಲ್ಲಿ ನಡೆದಿದೆ. ದಂಪತಿಯನ್ನು ಸಂತೋಷ್ ಕೊರಳ್ಳಿ (45), ಶೃತಿ (35), ಮಕ್ಕಳನ್ನು ಮುನಿಶ್ (9), ಮೂರು ತಿಂಗಳ ಮಗುವನ್ನು ಅನಿಶ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್, ಕಲಬುರಗಿಯ ಜೆಸ್ಕಾನಲ್ಲಿ ಸಿನಿಯರ್ ಅಸಿಸ್ಟಂಟ್ ಇಂಜಿಯಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಪತ್ನಿ ಹಾಗೂ ಮಕ್ಕಳನ್ನು ಮೊದಲು ಕೊಲೆ ಮಾಡಿ, ನಂತರ ಸಂತೋಷ್ ಮನೆಯಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.ಗಂಡ-ಹೆಂಡತಿ ಮಧ್ಯೆ ಆಗಾಗ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಇದರಿಂದ ಬೇಸತ್ತ ಸಂತೋಷ್ ಕೊರಳ್ಳಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಪ್ರಕರಣ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.