ಮಂಡ್ಯ : ಕಬಡ್ಡಿ ಪಂದ್ಯದ ವೇಳೆ ಘೋರ ದುರಂತ.. ಆಗಿದ್ದೇನು..?

ಗ್ಯಾಲರಿ ಕುಸಿದಿರುವುದು.
ಗ್ಯಾಲರಿ ಕುಸಿದಿರುವುದು.
ಮಂಡ್ಯ

ಮಂಡ್ಯ :

ಕಬಡ್ಡಿ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ನಡೆದಿದೆ. ಪಾಪಣ್ಣಚಾರಿ ಎಂಬುವರು ಮೃತ ದುರ್ದೈವಿಯಾಗಿದ್ದಾರೆ.

ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶ್ರೀ ಭೈರವ ಕಪ್‌ ಹೆಸರಿನಲ್ಲಿ ಮೈಸೂರು ವಿಭಾಗ ಮಟ್ಟದ ಟೂರ್ನಮೆಂಟ್‌ ಆಯೋಜನೆ ಮಾಡಲಾಗಿತ್ತು. ಕಬಡ್ಡಿ ಪಂದ್ಯವನ್ನ ವೀಕ್ಷಿಸಲು ಸ್ಥಳದಲ್ಲಿ ಸಾಕಷ್ಟು ಜನ ಸೇರಿದ್ದರು. ಈ ವೇಳೆ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದು ಈ ಅವಘಡ ಸಂಭವಿಸಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಚಿವ ಚಲುವರಾಯಸ್ವಾಮಿ ಹಾಗೂ ಮಾಜಿ ಸಚಿವ ಪುಟ್ಟರಾಜು ಮಂಡ್ಯ ಮಿಮ್ಸ್‌ ಶವಾಗಾರಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದು, ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಿಗಿಸುವ ಭರವಸೆ ನೀಡಿದ್ದಾರೆ. ಇನ್ನು ಈ ಘಟನೆಗೆ ಕಡಿಮೆ ಸಾಮರ್ಥ್ಯದ ಕಬ್ಬಿಣ ಬಳಕೆ ಮಾಡಿರೋದಕ್ಕೆ ಗ್ಯಾಲರಿ ಕುಸಿದಿದೆ ಎನ್ನಲಾಗ್ತಿದೆ.

Author:

...
Sushmitha N

Copy Editor

prajashakthi tv

share
No Reviews