ಮಂಡ್ಯ : ನಾಡಬಾಂಬ್ ಸ್ಪೋಟ | ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!

ನಾಡಬಾಂಬ್‌ ಸ್ಪೋಟಗೊಂಡಿರುವುದು.
ನಾಡಬಾಂಬ್‌ ಸ್ಪೋಟಗೊಂಡಿರುವುದು.
ಮಂಡ್ಯ

ಮಂಡ್ಯ:

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬಂದಹಳ್ಳಿಯ ಆಂಜನೇಯ ಬೆಟ್ಟದಲ್ಲಿ ನಾಡ ಬಾಂಬ್‌ ಸ್ಪೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಹರಿಯಂತ್‌ ಪಾಟೇಲ್‌ ಮತ್ತು ಪಾರ್ಥ ಗಾಯಗೊಂಡ ವಿದ್ಯಾರ್ಥಿಗಳಾಗಿದ್ದಾರೆ, ವಿದ್ಯಾರ್ಥಿಗಳಿಬ್ಬರು ಜೈನಬಸದಿ ಶಾಲೆಯಲ್ಲಿ ಓದುತ್ತಿದ್ದಾರೆ. ವಿದ್ಯಾರ್ಥಿಗಳು ಇಂದು ಬೆಟ್ಟ ಮೇಲಿನ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ಕೆ ತೆರಳಿದ್ದರು. ಸ್ವಚ್ಚತೆ ಮಾಡುವಾಗ ಕಸದ ರಾಶಿಗೆ ವಿದ್ಯಾರ್ಥಿಗಳು ಕೈ ಹಾಕುತ್ತಿದ್ದಂತೆ ನಾಡ ಬಾಂಬ್‌ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಓರ್ವನ ಅಂಗೈ ಛಿದ್ರಗೊಂಡಿದ್ದು. ಇನ್ನೋರ್ವನ ಮುಖದ ಭಾಗಕ್ಕೆ ಗಾಯವಾಗಿದೆ. ಕೂಡಲೇ ಗಾಯಗೊಂಡ ವಿದ್ಯಾರ್ಥಿಗಳನ್ನು ಬೆಳ್ಳೂರಿನ ಆದಿ ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾಡು ಹಂದಿ ಬೇಟೆಗೆ ನಾಡ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಬಿಂಡಿಗನವಿಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author:

share
No Reviews