ಮಂಡ್ಯ:
ಪುಡಿ ರೌಡಿಗಳ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವು ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ನಡೆದಿದೆ.
ಪುಡಿ ರೌಡಿಗಳ ಅಟ್ಟಹಾಸ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ, ಮೂರು ಪ್ರಕರಣಗಳಲ್ಲಿ 17 ಮಂದಿಯನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲೂ ಯತ್ನಿಸಿದ್ದಾಗ ಸುಭಾಷ್ ಅಲಿಯಾಸ್ ಸುಬ್ಬು ಎಂಬ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಈತ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಪೊಲೀಸರಿಂದ ತಲೆಮರೆಸಿಕೊಂಡಿದ್ದ, ಬಿ. ಹೊಸೂರು ಸಮೀಪ ಈತ ತಲೆಮರೆಸಿಕೊಂಡಿರುವ ಮಾಹಿತಿ ತಿಳಿದು ಪೊಲೀಸರು ಬಂಧಿಸಲು ತೆರಳಿದ್ದಾರೆ, ಈ ವೇಳೆ ಪೊಲೀಸರ ಮೇಲೆ ಆರೋಪಿ ಹಲ್ಲೆ ಮಾಡಿ ಪರಾರಿಯಾಗಲೂ ಯತ್ನಿಸಿದ್ದಾನೆ. ಮಂಡ್ಯ ಪೂರ್ವ ಠಾಣೆಯ PSI ಶೇಷಾದ್ರಿ ಕುಮಾರ್ ತಂಡ ತಮ್ಮ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗಾಯಾಳು ಆರೋಪಿಯನ್ನು ಬಂಧಿಸಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ವಯಸ್ಸಿನಲ್ಲೇ ಯುವಕರು ತಪ್ಪುದಾರಿಯಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಪುಡಿರೌಡಿಗಳ ವಿರುದ್ಧ ಮುಂದೆಯೂ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.