ಮಂಗಳೂರು :
ಫಾಝಿಲ್ ಕೊಲೆ ಆರೋಪಿ ರೌಡಿ ಶೀಟರ್ 32 ವರ್ಷದ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ತಂಡವೊಂದು ತಲವಾರಿನಲ್ಲಿ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರಿನ ಹೊರವಲಯದ ಬಜ್ಪೆ ಕಿನ್ನಿಪದವು ಎಂಬಲ್ಲಿ ನಡೆದಿದೆ. ಸುಹಾಸ್ ಶೆಟ್ಟಿಯನ್ನು ಕೊಚ್ಚಿ ಕೊಲೆ ಮಾಡುತ್ತಿರುವ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಎರಡು ವರ್ಷಗಳ ಹಿಂದೆ ಸುರತ್ಕಲ್ ನಲ್ಲಿ ನಡೆದಿದ್ದ ಫಾಜಿಲ್ ಎಂಬಾತನ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಮತ್ತು ಭಜರಂಗದಳದ ಗೋರಕ್ಷಾ ವಿಭಾಗದ ಸದಸ್ಯ ಹತ್ಯೆಯಾದ ಸುಹಾಸ್ ಶೆಟ್ಟಿ ಎನ್ನಲಾಗಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆದಿತ್ತು ಎನ್ನಲಾಗಿತ್ತು. ಇದೀಗ ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ತಲವಾರಿನಿಂದ ದಾಳಿ ನಡೆಸಿದ ದುಷ್ಕರ್ಮಿಗಳು, ನಡುರಸ್ತೆಯಲ್ಲೇ ಕೊಚ್ಚಿ ಕೊಂದು ಹಾಕಿದ್ದಾರೆ. ಕೊಲೆಯ ವಿಡಿಯೋ ಸೆರೆಯಾಗಿದ್ದು, ಜಾಲತಾಣಗಳಲ್ಲಿ ವೈರಲ್ ಆಗ್ತಿದೆ.