ಮಂಗಳೂರು :
ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿಬಿಡಲಾಗಿದೆ. ಮಂಗಳೂರಿನ ಹಿಂದೂ ಮುಖಂಡ ಭರತ್ ಕುಮ್ನೇಲ್ ಎಂಬುವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಇವರ ಹತ್ಯೆ ಬಗ್ಗೆ ಡೇಟ್ ಫಿಕ್ಸ್ ಮಾಡಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿದಾಡುತ್ತಿದೆ.
ಭರತ್ ಕುಮ್ಡೇಲ್ ರನ್ನು 5-5-2025 ರಾತ್ರಿ 9.30 ಕ್ಕೆ ನಿನ್ನ ಸ್ಥಳದಲ್ಲೇ ಕೊಲೆ ಮಾಡುತ್ತೇವೆ ಎಂದು ಕಿಡಿಗೇಡಿಗಳು ಪೋಸ್ಟ್ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಭರತ್ ಕುಮ್ಡೇಲ್ ಎಸ್ಡಿಪಿಐ ಮುಖಂಡ ಅಶ್ರಫ್ ಹತ್ಯೆಯ ಪ್ರಮುಖ ಆರೋಪಿ. ಇನ್ನು ಭರತ್ ಕುಮ್ಡೇಲ್ ಮಾತ್ರವಲ್ಲದೇ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ಗೂ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್, ಶರಣ್ ಹತ್ಯೆಯಾಗಲು ತಯಾರಾಗಿರು ಎಂದು ಸಹ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹರಿಬಿಡಲಾಗಿದೆ.