TUMAKURU : ತುಮಕೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ

ಅಗ್ನಿ ಅವಘಡ
ಅಗ್ನಿ ಅವಘಡ
ತುಮಕೂರು

ತುಮಕೂರು: 

ತುಮಕೂರು ನಗರದಲ್ಲಿ ನಿನ್ನೆ ತಡರಾತ್ರಿ ಭಾರೀ ಅಗ್ನಿ ಅವಘಡವೊಂದು ನಡೆದುಹೋಗಿದೆ. ನಗರದ ಮಂಡಿಪೇಟೆಯ ಜೈ ಭಾರತ್ಚಿತ್ರಮಂದಿರದ ಪಕ್ಕದಲ್ಲಿರುವ ಶ್ರೀ ಸಾಯಿ ಬೇಕರ್ಸ್ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ 12.30ರ ಸುಮಾರಿಗೆ ಆಕಸ್ಮಿಕ ಬೆಂಕಿ ತಗುಲಿದ್ದು,  ಬೆಂಕಿಯ ತೀವ್ರತೆಗೆ ಒಂದು ಬೈಕ್ಸೇರಿದಂತೆ ಬೇಕರಿ ವಸ್ತುಗಳು ಸುಟ್ಟು ಕರಕಲಾಗಿವೆ.

ಶ್ರೀ ಸಾಯಿ ಬೇಕರ್ಸ್ನ ಎರಡು ಅಂತಸ್ತಿನ ಕಟ್ಟಡದಲ್ಲಿ ಮಧ್ಯರಾತ್ರಿ ಇದ್ದಕ್ಕಿದ್ದ ಹಾಗೆಯೇ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಬೆಂಕಿ ಇಡೀ ಕಟ್ಟಡವನ್ನ ಆವರಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಬೇಕರಿ ಒಳಗಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಆದ್ರೆ ಈ ಬೆಂಕಿ ಬೆಂಕಿ ಅವಘಡಕ್ಕೆ ನಿಖರ ಕಾರಣ ಏನು ಅನ್ನೋದು ತಿಳಿದುಬಂದಿಲ್ಲ.

ಇನ್ನು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಶೀಘ್ರವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬೆಂಕಿ ಅನಾಹುತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಒಟ್ಟಿನಲ್ಲಿ ನಗರದ ಮಂಡಿಪೇಟೆಯಲ್ಲಿ ಪದೇಪದೇ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇದೆ. ಕಳೆದ ನಾಲ್ಕೈದು ತಿಂಗಳ ಹಿಂದೆ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದ ಅಂಗಡಿ ಹೊತ್ತಿ ಉರಿದಿತ್ತು. ಇದೀಗ ಬೇಕರಿ ಸುಟ್ಟು ಭಸ್ಮವಾಗಿದೆ.

Author:

share
No Reviews