MYSURU: ಉದಯಗಿರಿ ಠಾಣೆ ಗಲಭೆ ಕೇಸ್ ಬಗ್ಗೆ ಪ್ರಚೋದನೆ ನೀಡಿದ್ದ ಮೌಲ್ವಿ 11 ದಿನಗಳ ಬಳಿಕ ಅರೆಸ್ಟ್

ಗಲಭೆ ನಡೆದ ದೃಶ್ಯ
ಗಲಭೆ ನಡೆದ ದೃಶ್ಯ
ಮೈಸೂರು

ಮೈಸೂರು

ಉದಯಗಿರಿ ಪೊಲೀಸ್​ ಠಾಣೆ   ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಗೆ ಕಾರಣವಾಯ್ತಾ ವ್ಯಕ್ತಿಯೊಬ್ಬನ ಪ್ರಚೋದನಾಕಾರಿ ಹೇಳಿಕೆ ಎಂಬ ಪ್ರಶ್ನೆ ಉದ್ಭವಿಸಿದೆ. ಗಲಭೆ ನಡೆಯುವ ಮುನ್ನ ಮುಫ್ತಿ ಮುಷ್ತಾಕ್​​ ಮಕ್ಬೋಲಿ ಎಂಬ ವ್ಯಕ್ತಿ ಮೈಕ್ ಹಿಡಿದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ವಿಡಿಯೋ ವೈರಲ್​​ ಆಗಿದೆ. ಪ್ರಚೋದನೆ ನೀಡಿದ ಮುಷ್ತಾಕ್ ಮಕ್ಬೋಲಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದರು.

ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಯನ್ನ ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಗಲಭೆ ನಡೆದ 11 ದಿನಗಳ ಬಳಿಕ ಮೌಲ್ವಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಮುಂಜಾಗ್ರತ ಕ್ರಮವಾಗಿ ಉದಯಗಿರಿ ಪೊಲೀಸ್ ಠಾಣೆಗೆ ಬಿಗಿ ಬಂದೂಬಸ್ತ್ ನಿಯೋಜಿಸಲಾಗಿದೆ.

ಧರ್ಮ ರಕ್ಷಣೆಗೆ ಬದ್ಧತೆ ನಿನ್ನೆಯೂ ಇತ್ತು, ಇವತ್ತು ಇದೆ. ಎಲ್ಲರೂ ಘೋಷಣೆ ಕೂಗಿ, ನಾವು ಪ್ರಾಣ ಬೇಕಾದರೂ ಕೊಡುತ್ತೇವೆ. ಸದಾ ಮುಸ್ಲಿಂರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಸುರೇಶ್ ಹೆಸರಿನ ನಾಯಿ, ಸುರೇಶ್ ಹೆಸರಿನ ಹರಾಮಿ ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್​ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು ಮರಣದಂಡನೆ ವಿಧಿಸಬೇಕು.  ಆತನಿಗೆ ಮರಣದಂಡನೆಯಾಗಬೇಕು ಎಂಬುವುದು. ಮೈಸೂರಿನ ಎಲ್ಲ ಮುಸ್ಲಿಂರು ಒಂದಾಗಿ. ಇದಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ. ಈ ವಿಡಿಯೋವನ್ನು ಎಲ್ಲ ಕಡೆ ಶೇರ್​ ಮಾಡಿ” ಎಂದು ಮೈಕ್ ಹಿಡಿದು ಭಾಷಣ ಮಾಡಿದ ವಿಡಿಯೋ ವೈರಲ್​ ಆಗಿದೆ. ಮುಷ್ತಾಕ್​ನ ಹೇಳಿಕೆಯಿಂದ ಪ್ರಚೋದನೆಗೊಂಡು ಗಲಭೆ ನಡೆದಿದೆ ಎಂಬ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಚೋದನೆ ನೀಡಿದ ಮುಷ್ತಾಕ್​ನನ್ನು ಪೊಲೀಸರು ಬಂಧಿಸಿದ್ದಾರೆ.

Author:

...
Reporter

ManyaSoft Admin

Ads in Post
share
No Reviews