RAMANAGARA: ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಮೀನಾ ತೂಗುದೀಪ ಭೇಟಿ

ರಾಮನಗರ: 

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟ ದರ್ಶನ್‌ ತಾಯಿ ಮೀನಾ ತೂಗುದೀಪ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದಲ್ಲಿರುವ ಚಾಮುಂಢೇಶ್ವರಿ ದೇವಾಲಯ ಕ್ಷೇತ್ರದಲ್ಲಿ ಪವಾಡ ನಡೆಯುತ್ತದೆ ಎಂಬ ನಂಬಿಕೆಯಿದೆ. ಗೌಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ 60 ಅಡಿ ಎತ್ತರದ ಚಾಮುಂಡೇಶ್ವರಿ ವಿಗ್ರಹದ ದೇವಾಲಯದಲ್ಲಿ ಮೀನಾ ತೂಗುದೀಪ ಪವಾಡ ಬಸಪ್ಪನ ಆಶೀರ್ವಾದ ಪಡೆದಿದ್ದಾರೆ. ಮಗನ ಸಂಕಷ್ಟಗಳನ್ನ ನಿವಾರಣೆ ಮಾಡುವಂತೆ ಮೀನಾ ತೂಗುದೀಪ ದೇವರ ಮೊರೆಹೋಗಿದ್ದಾರೆ.  ಪವಾಡ ಬಸಪ್ಪನ ಬಳಿ ಪ್ರಾರ್ಥನೆ ಮಾಡಿದ ಮೀನಾ ತೂಗುದೀಪ ಅವರಿಗೆ ಪವಾಡ ಬಸಪ್ಪ ತನ್ನ ಬಲಗಾಲನ್ನು ಕೊಟ್ಟು ಆಶೀರ್ವಾದ ಮಾಡಿದೆ.

ಇನ್ನು ಮೀನಾಗೆ ದೇವಾಲಯದ ಆಡಳಿತ ಮಂಡಳಿಯಿಂದ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಮೀನಾ, ಈ ಕ್ಷೇತ್ರದಲ್ಲಿ ಚಾಮುಂಡೇಶ್ವರಿ ನೆಲೆಸಿದ್ದಾಳೆ. ಇಲ್ಲಿ ಎಲ್ಲಾ ಕಡೆ ಪಾಸಿಟಿವ್ ಎನರ್ಜಿ ಇದೆ. ಹಾಗಾಗಿ ಬಂದು ದರ್ಶನ ಪಡೆದಿದ್ದೇನೆ ಎಂದರು.

Author:

...
Sub Editor

ManyaSoft Admin

share
No Reviews