ಪಾವಗಡ:
ಮಾನಸಿಕ ಅಸ್ವಸ್ಥನೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕಣಿವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಣಿವೇನಹಳ್ಳಿ ಗ್ರಾಮದ ನಿವಾಸಿ ಹನುಮಂತರಾಯಪ್ಪ ಎಂಬುವರು ಮೃತ ದುರ್ದೈಯಾಗಿದ್ದಾನೆ.
ಕಳೆದ ಐದಾರು ತಿಂಗಳಿನಿಂದ ಮಾನಸಿಕ ಅಸ್ವಸ್ಥನಾಗಿದ್ದ ಹನುಮಂತರಾಯಪ್ಪ ಈ ಹಿಂದೆ ಹಲವು ಬಾರಿ ಆತ್ನಹತ್ಯಗೆ ಯತ್ನಿಸಿದ್ದ. ಇದ್ರಿಂದ ಕುಟುಂಬಸ್ಥರು ಆತನನ್ನು ಮನೆಯಿಂದ ಹೊರಹೋಗದಂತೆ ಮನೆಯಲ್ಲೇ ಕೂಡಿಹಾಕಿದ್ರು, ಆದ್ರೆ ನಿನ್ನೆ ಮನೆಯಿಂದ ತಪ್ಪಿಸಿಕೊಂಡು ಹೋಗಿ ತೋಟದಲ್ಲಿ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡಿದ್ದಾನೆ, ಇನ್ನು ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಹನುಮಂತರಾಯಪ್ಪನನ್ನು ಗ್ರಾಮಸ್ಥರು ಗಮನಿಸಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಅಲ್ದೇ ಯುವಕ ಕತ್ತು ಕೊಯ್ದುಕೊಂಡು ರಂಪಾಟ ನಡೆಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಪೊಲೀಸರ ತನಿಖೆ ಮೂಲಕ ಆತ್ಮಹತ್ಯೆಗೆ ಕಾರಣ ತಿಳಿಯಬೇಕಿದೆ.