ಇಂಡಿಯನ್ ಪ್ರೀಮಿಯರ್ ಲೀಗ್ 2025ರ 18ನೇ ಆವೃತ್ತಿಯ 12ನೇ ಪಂದ್ಯದಲ್ಲಿ ಮುಂಬೈ ಇಂಡಿನ್ಸ್ ತಂಡ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಖಾಮುಖಿಯಾಗುತ್ತಿವೆ. ಮುಂಬೈ ಇಂಡಿನ್ಸ್ VS ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯವು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ತಂಡಗಳು ಐಪಿಎಲ್‌ನಲ್ಲಿ ಇದುವರೆಗೂ ಒಟ್ಟು 34 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇರಲ್ಲಿ ಮುಂಬೈ ಇಂಡಿಯನ್ಸ್ 23 ಪಂದ್ಯಗಳಲ್ಲಿ ಗೆದ್ದರೆ ಕೆಕೆಆರ್ 11 ಪಂದ್ಯಗಳನ್ನು ಗೆದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಕೆಕೆಆರ್ ವಿರುದ್ಧ ಆಡಿರುವ 9 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸಿದೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿ ಸೂರ್ಯಕುಮಾರ್ ಯಾದವ್, ರಾಬಿನ್ ಮಿಂಜ್, ರಿಯಾನ್ ರಿಕೆಲ್ಟನ್, ಜಿತ್ ಕೃಷ್ಣನ್ , ಬೆವೊನ್ ಜೇಕಬ್ಸ್, ತಿಲಕ್ ವರ್ಮಾ, ನಮನ್ ಧೀರ್, ವಿಲ್ ಜಾಕ್ಸ್, ಮಿಚೆಲ್ ಸ್ಯಾಂಟ್ನರ್, ರಾಜ್ ಅಂಗದ್ ಬಾವಾ, ವಿಘ್ನೇಶ್ ಪುತ್ತೂರ್, ಕಾರ್ಬಿನ್ ಬಾಷ್, ಟ್ರೆಂಟ್ ಬೌಲ್ಟ್, ಕರಣ್ ಶರ್ಮಾ, ದೀಪಕ್ ಚಹರ್, ಅಶ್ವನಿ ಕುಮಾರ್, ರೀಸ್ ಟಾಪ್ಲೆ, ವಿಎಸ್ ಪೆನ್ಮೆಟ್ಸಾ, ಅರ್ಜುನ್ ತೆಂಡೂಲ್ಕರ್, ಮುಜೀಬ್ ಉರ್ ರಹಮಾನ್, ಜಸ್ಪ್ರೀತ್ ಬುಮ್ರಾ ಇದ್ದಾರೆ.
ಇನ್ನು ಕೆಕೆಆರ್ ತಂಡದಲ್ಲಿ ಸುನಿಲ್ ನರೈನ್, ಕ್ವಿಂಟನ್ ಡಿ ಕಾಕ್, ಅಜಿಂಕ್ಯ ರಹಾನೆ (ನಾಯಕ), ಅಂಗ್ಕ್ರಿಶ್ ರಘುವಂಶಿ, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ಅನ್ರಿಚ್ ನಾರ್ಕಿಯಾ, ವರುಣ್ ಚಕ್ರವರ್ತಿ ಇದ್ದಾರೆ.