ಕಲಬುರಗಿ: ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ | ಐವರು ದುರ್ಮರಣ

ಕಲಬುರಗಿ: 

ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.

ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲೆಯ ಸೊನ್ನ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಟೆಂಪೋ ಟ್ರಾವೆಲರ್‌ ಬಂದು ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದ ಪರಿಣಾಮ ಐವರು ಮೃತಪಟ್ಟು, 11 ಮಂದಿ ಗಾಯಗೊಂಡಿದ್ದಾರೆ.

ಕಲಬುರಗಿಯ ಖಾಜಾ ಬಂದೇನವಾಜ್​ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್​​ನಲ್ಲಿದ್ದ  ಒಟ್ಟು 31 ಜನರ ಪೈಕಿ ಐವರು ಸಾವನ್ನಪ್ಪಿದ್ದಾರೆ. 11 ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್​​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಈ ಪ್ರಕರಣ ನೆಲೋಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

 

Author:

share
No Reviews