KALABURGI : ಅಹಮದಾಬಾದ್ ವಿಮಾನ ದುರಂತ (Ahmedabad Plane Crash) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಖಾತೆ ಸಚಿವ ರಾಮ ಮೋಹನ್ ನಾಯ್ಡು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಚಿವ ಈಶ್ವರ ಖಂಡ್ರೆ (Eshwara Khandre) ಒತ್ತಾಯಿಸಿದರು.
ಕಲಬುರಗಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಮಾನ ದುರಂತಕ್ಕೆ ಕೇಂದ್ರ ಸರ್ಕಾರ ಹೊಣೆ ಹೊತ್ತು ಕೂಡಲೇ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡಬೇಕು. ಇದು ಒಂದು ಅತಿದೊಡ್ಡ ದುರಂತವಾಗಿದೆ. ಅತ್ಯಂತ ನೋವಿನ ಸಂಗತಿಯಾಗಿದೆ. ಇಂತಹ ದುರಂತ ನಡೆಯದಂತೆ ಸರ್ಕಾರ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.