ಮಧುಗಿರಿ: ಜನ ಸಂಪರ್ಕ ಸಭೆಯಲ್ಲಿ ಜನರ ಸಮಸ್ಯೆ ಆಲಿಸಿದ ಸಚಿವ ರಾಜಣ್ಣ..!

ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ಉದ್ಘಾಟಿಸುತ್ತಿರುವುದು.
ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ಉದ್ಘಾಟಿಸುತ್ತಿರುವುದು.
ತುಮಕೂರು

ಮಧುಗಿರಿ:

ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಸಚಿವ ರಾಜಣ್ಣ ಅವರೇ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ ಸಿಇಒ ಜಿ. ಪ್ರಭು, ತಾಲೂಕು ಪಂಚಾಯತ್‌ ಇಒ ಲಕ್ಷಣ್‌ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಹಕಾರಿ ಸಚಿವ ರಾಜಣ್ಣ, ಸರ್ಕಾರದ ಗ್ಯಾರಂಟಿಗಳನ್ನು ಟೀಕೆ ಮಾಡುವವರು ಟೀಕೆ ಮಾಡಲಿ ಅದನ್ನು ತಲೆ ಕೆಡಿಸಿಕೊಳ್ಳಲ್ಲ. ರಾಜ್ಯ ಸರಕಾರದ ಯೋಜನೆಗಳನ್ನು ಸಿದ್ದರಾಮಯ್ಯ ಕೇವಲ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿಲ್ಲ ಬದಲಾಗಿ ಇಡೀ ರಾಜ್ಯದ ಜನರಿಗೆ ಕೊಟ್ಟಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಲ ನೀಡಿರುವುದು ಮಧುಗಿರಿ ತಾಲೂಕಿಗೆ ಈ ಭಾಗದಲ್ಲಿ ಶಾಶ್ವತ ನೀರಾವರಿ ಯೋಜನೆಗಳಿಲ್ಲ ಇದಕ್ಕಾಗಿ ಡಿಸಿಸಿ ಬ್ಯಾಂಕ್ ಕೃಷಿ, ಗೋಲ್ಡ್ ಲೋನ್ ನೀಡುತ್ತಿದೆ. ಬಡವರ ಪರ ಕೆಲಸ ಮಾಡಿದಾಗ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತೇವೆ ಎಂದು ರಾಜಣ್ಣ ಹೇಳಿದರು.

ಅಲ್ಲದೇ ಮಕ್ಕಳಿಗೆ ಆಸ್ತಿ ಕೊಡಲು ಆಗಲ್ಲ ಅದಕ್ಕೆ ಅವರಿಗೆ ಉತ್ತಮ ಶಿಕ್ಷಣ ಕೊಡಿಸಿ, ಅವರನ್ನೇ ದೊಡ್ಡ ಆಸ್ತಿಯನ್ನಾಗಿ ಮಾಡಿ ಎಂದು ಸಲಹೆ ನೀಡಿದರು. ಆಸ್ತಿ ಮಾಡಿದರೆ ಮಾರಾಟ ಮಾಡಬಹುದು, ಮಾಡಿಕೊಳ್ಳಬಹುದು ಆದರೆ ಉತ್ತಮ ಶಿಕ್ಷಣ ಕೊಡಿಸಿದರೆ ಯಾರಿಂದಲೂ ಕಸಿಯಲು ಸಾಧ್ಯವಿಲ್ಲ.  ಜಿಲ್ಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಏರಿಕೆ ನಿರೀಕ್ಷೆ ಇದೆ. ಅದರಲ್ಲೂ ನನ್ನ ಕ್ಷೇತ್ರದಲ್ಲಿ ಕಡ್ಡಾಯವಾಗಿ ಉತ್ತಮ ಫಲಿತಾಂಶ ಬರುವ ಭರವಸೆ ಇದೆ ಇದಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹೆಚ್ಚು ಒತ್ತು ನೀಡಬೇಕು ಎಂದರು.

Author:

share
No Reviews