ರಾಮನಗರ:
ರಾಮನಗರದ ಬಿಡದಿ ಕೈಗಾರಕಾ ಪ್ರದೇಶದಲಿರುವ ಪ್ರತಿಷ್ಠಿತ ಖಾಸಗಿ ಕಂಪನಿಯ ಶಾಚಾಲಯದ ಗೋಡೆಯ ಮೇಲೆ ಪಾಕಿಸ್ತಾನದ ಪರ ಘೋಷಣೆ ಬರೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಕೃ ತ್ಯವನ್ನು ಯಾರು ಯಾವ ಕಾರಣಕ್ಕೆ ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ. ಇನ್ನು ಪಾಕಿಸ್ತಾನದ ಪರ ಘೋಷಣೆ ಬರೆದಿರುವ ಜೊತೆಗೆ ಕನ್ನಡಿಗರನ್ನು ನಿಂದಿಸಿದ್ದಾರೆ. ಇನ್ನು ಖಾಸಗಿ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನಕ್ಕೆ ಜೈ ಎಂದು ಬರೆದಿರುವ ಜೊತೆಗೆ ಅವಾಚ್ಯ ಶಬ್ದಗಳಿಂದ ಕನ್ನಡಿಗರನ್ನು ನಿಂದಿಸಿದ್ದಾರೆ. ಈ ಬಗ್ಗೆ ಕಂಪನಿಯು ಸುತ್ತೋಲೆ ಹೊರಡಿಸಿದ್ದು, ಈ ಕೃತ್ಯವನ್ನು ಯಾರೇ ಮಾಡಿದ್ದರು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಘಟನೆಯನ್ನು ಖಂಡಿಸಿ ಕಂಪನಿ ಎದುರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಭಯೋತ್ಪಾದಕ ಕೃತ್ಯ ಎಸಗಿರುವ ಕಿಡಿಗೇಡಿ ವಿರುದ್ಧ ಗಂಭೀರ ಪ್ರಕರಣ ದಾಖಲು ಮಾಡಬೇಕು. ಕಿಡಿಗೇಡಿಯನ್ನು ಗಡಿಪಾರು ಮಾಡಬೇಕು. ಪ್ರಕರಣ ಮುಚ್ಚಾಕಲು ಯತ್ನಿಸಿದ್ದ ಆಡಳಿತ ಮಂಡಲಿ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ ಸಂಘಟನೆ ಮುಖಂಡ ಕನ್ನಡ ಮಂಜು ಆಗ್ರಹಿಸಿದರು.