CRICKET : ಸೋಲಿನ ನಡುವೆಯೂ ಮಿಚೆಲ್ ಸ್ಟಾರ್ಕ್ ವಿಶ್ವ ದಾಖಲೆ

CRICKET NEWS : ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಐಸಿಸಿ ನಾಕೌಟ್ ಪಂದ್ಯಗಳಲ್ಲಿನ ವಿಶಿಷ್ಟ ವಿಶ್ವ ದಾಖಲೆ ಮಾಡಿದ್ದಾರೆ.

ಸೌತ್ ಆಫ್ರಿಕಾವನ್ನು ಎದುರಿಸಿದ ಈ ಮಹತ್ವದ ಪಂದ್ಯದಲ್ಲಿ ಸ್ಟಾರ್ಕ್ ಮೊದಲ ಇನಿಂಗ್ಸ್‌ನಲ್ಲಿ 2 ಮತ್ತು ದ್ವಿತೀಯ ಇನಿಂಗ್ಸ್‌ನಲ್ಲಿ 3 ವಿಕೆಟ್ ಕಬಳಿಸಿ, ಒಟ್ಟು 5 ವಿಕೆಟ್ ಗಳಿಸಿದರು. ಈ ಐದು ವಿಕೆಟ್ಗಳೊಂದಿಗೆ ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನು ಮಿಚೆಲ್ ಸ್ಟಾರ್ಕ್ ತಮ್ಮದಾಗಿಸಿಕೊಂಡಿದ್ದಾರೆ.

ಈವರೆಗೆ ಈ ದಾಖಲೆ ಶ್ರೀಲಂಕಾದ ಲೆಜೆಂಡರಿ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರ ಹೆಸರಿನಲ್ಲಿ ಇತ್ತು. ಮುರಳೀಧರನ್ ಐಸಿಸಿ ಟೂರ್ನಿಗಳ 15 ನಾಕೌಟ್ ಪಂದ್ಯಗಳಲ್ಲಿ 23 ವಿಕೆಟ್ ಪಡೆದಿದ್ದರು. ಆದರೆ ಈಗ ಸ್ಟಾರ್ಕ್ ಅವರು ಕೇವಲ 13 ನಾಕೌಟ್ ಪಂದ್ಯಗಳಲ್ಲಿ 25 ವಿಕೆಟ್ ಕಬಳಿಸುವ ಮೂಲಕ ಈ ದಾಖಲೆಯನ್ನು ಮುರಿದಿದ್ದಾರೆ.

ಸ್ಟಾರ್ಕ್‌ನ ಈ ಸಾಧನೆ ಕ್ರಿಕೆಟ್ ಜಗತ್ತಿನಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗುತ್ತಿದೆ. ಮಹತ್ವದ ಪಂದ್ಯಗಳಲ್ಲಿ ಮಿಂಚುವ ಸಾಮರ್ಥ್ಯ ಹೊಂದಿರುವ ಈ ಎಡಗೈ ವೇಗಿಯ ಪ್ರದರ್ಶನ ಆಸ್ಟ್ರೇಲಿಯಾದ ಗೆಲುವಿಗೆ ಸಹಕಾರಿಯಾದಂತಾಗಿದೆ.

Author:

...
Keerthana J

Copy Editor

prajashakthi tv

share
No Reviews