SIRA: ಗ್ರಾಮ ಆಡಳಿತ ಅಧಿಕಾರಿಗಳಿಂದ ಮನವಿ ಸ್ವೀಕರಿಸಿದ ಶಾಸಕ ಜಯಚಂದ್ರ

ಗ್ರಾಮ ಆಡಳಿತ ಅಧಿಕಾರಿಗಳಿಂದ ಮನವಿ ಸ್ವೀಕರಿಸಿದ ಶಾಸಕ ಜಯಚಂದ್ರ
ಗ್ರಾಮ ಆಡಳಿತ ಅಧಿಕಾರಿಗಳಿಂದ ಮನವಿ ಸ್ವೀಕರಿಸಿದ ಶಾಸಕ ಜಯಚಂದ್ರ
ತುಮಕೂರು

ಶಿರಾ:

ಸತತ 11 ದಿನಗಳಿಂದಲೂ ರಾಜ್ಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಮುಂದುವರೆದಿದೆ.. ಶಿರಾದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಮುಂದುವರೆದಿದ್ದು, ಮುಷ್ಕರದ ಸ್ಥಳಕ್ಕೆ ಶಾಸಕ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಭೇಟಿ ನೀಡಿದ್ರು..

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಟಿ.ಬಿ ಜಯಂಚಂದ್ರ ಅವರು ಅಧಿಕಾರಿಗಳ ಸಮಸ್ಯೆ ಆಲಿಸಿ, ಮನವಿಯನ್ನು ಸ್ವೀಕರಿಸಿದ್ರು.ಈ‌ ಸಂದರ್ಭದಲ್ಲಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಕಂದಾಯ ಇಲಾಖೆ ಇವರಿಗೆ ದೂರವಾಣಿ ಕರೆ ಮಾಡಿ ಸಮಸ್ಯೆ ಬಗ್ಗೆ ಹರಿಸುವಂತೆ ತಿಳಿಸಿದ್ರು.

ನಂತರ ಮಾತನಾಡಿದ ಅವರು, ನಿಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು, ಬಗೆಹರಿಸಲು ಪ್ರಯತ್ನಿಸುತ್ತೇನೆ. ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಉತ್ತಮ ಸೇವೆಗಳನ್ನು ನೀಡಬೇಕು ಎಂದ್ರು.

Author:

share
No Reviews