ರಾಯಚೂರು:
ರಾಯಚೂರಿನ ದೇವದುರ್ಗ ಪಟ್ಟಣದ ಮಿಯಾಪುರ ಕ್ರಾಸ್ ಬಳಿ ಬೈಕ್ ಸವಾರನಿಗೆ ಶಾಸಕಿ ಕರೆಮ್ಮ ಜಿ ನಾಯಕ್ ಅವರ ಪುತ್ರಿ ಗೌರಿ ಅವರ ಕಾರು ಡಿಕ್ಕಿ ಹೊಡೆದು ಬೈಕ್ ಸವಾರನ ತಲೆಗೆ ಪೆಟ್ಟು ಬಿದ್ದಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ವ್ಯಕ್ತಿಯು ಆಂಧ್ರ ಮೂಲದ ಕೋಮಿಶೆಟ್ಟಿ ಕೃಷ್ಣ ಎಂದು ಗುರುತಿಸಲಾಗಿದೆ.
ಇನ್ನು ಘಟನೆಯ ನಂತರ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾತ್ರವಲ್ಲ ಶಾಸಕರ ಪುತ್ರಿ ಗೌರಿ ಆಸ್ಪತ್ರೆಗೆ ಭೇಟಿ ನಿಡಿ ಸೂಕ್ತ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದಾರೆ. ಸದ್ಯ, ಗಾಯಾಳುವಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆಯುತ್ತಿದೆ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.