BANGALORE : ನ್ಯಾಯಾಧೀಶರ ಮುಂದೆ ಶರಣಾದ ಶಾಸಕ ವಿನಯ್ ಕುಲಕರ್ಣಿ | ಕೂಡಲೇ CBI ವಶಕ್ಕೆ

BANGALORE NEWS : 2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ [VINAY KULAKARNI] ಅವರು CBI ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಪೆಷಲ್ ಜನಪ್ರತಿನಿಧಿ ನ್ಯಾಯಾಲಯಕ್ಕೆ ಶುಕ್ರವಾರ ಶರಣಾದ ನಂತರ, ಸಿಬಿಐ ಅಧಿಕಾರಿಗಳು ಅವರನ್ನು ಕಸ್ಟಡಿಯೊಳಗೆ ತೆಗೆದುಕೊಂಡಿದ್ದಾರೆ.

ಜೂನ್ 6ರಂದು ಸುರಕ್ಷಿತ ಜಾಮೀನನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ವಿನಯ್ ಕುಲಕರ್ಣಿಗೆ ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ನಿರ್ದೇಶನ ನೀಡಿತ್ತು. ಇದರಂತೆ ಅವರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ನ್ಯಾಯಾಲಯದ ಸೂಚನೆಯ ಮೇರೆಗೆ ಸಿಬಿಐ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

 

Author:

...
Keerthana J

Copy Editor

prajashakthi tv

share
No Reviews