ದೇಶ:
ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ಪಾಕ್ ಉಗ್ರರು 26 ಜನರನ್ನು ಹತ್ಯೆ ಮಾಡಿದ್ದರು. ಈ ಕೃತ್ಯದ ಹಿನ್ನಲೆ ಭಾರತ ಮತ್ತು ಪಾಕಿಸ್ತಾನದ ನಡುವಿನ ವೈರುತ್ವ ಉಂಟಾಗಿದೆ. ಉಗ್ರರನ್ನು ಮಟ್ಟ ಹಾಕಲೇ ಬೇಕು ಎಂದು ಪಣ ತೊಟ್ಟ ಮೋದಿಯವರು ರಾಜ ತಾಂತ್ರಿಕವಾಗಿ ಪಾಕ್ ಮೇಲೆ ಎರಗಿದ್ರು. ಒಂದರ ಮೇಲೆ ಒಂದರಂತೆ ಪೆಟ್ಟಿನ ಮೇಲೆ ಪೆಟ್ಟು ನೀಡಿದ್ದರು.
ಪಾಕಿಸ್ತಾನ ಮತ್ತು ಭಾರತ ನಡುವೆ ಯುದ್ಧದ ಸನ್ನಿವೇಶ ನಿರ್ಮಾಣವಾಗಿದೆ. ಈ ನಡುವೆ ದೇಶದ ಭದ್ರತಾ ಪರಿಸ್ಥಿತಿ ಪರಿಶೀಲನೆ ಕುರಿತು ಸೇನಾ ಮುಖ್ಯಸ್ಥರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಇಂದು ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಪ್ರಧಾನಿ ಮೋದಿಯವರ ಜೊತೆ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ದೇಶದ ಭದ್ರತಾ ವ್ಯವಸ್ಥೆ ಮತ್ತು ಪರಿಸ್ಥಿತಿಯ ಬಗ್ಗೆ ಸುಮಾರು ಅರ್ಧ ಗಂಟೆಗೂ ಹೆಚ್ಚಿನ ಕಾಲ ಚರ್ಚೆ ನಡೆಸಿದರು. ಮೊನ್ನೆ ತಾನೇ ನೌಕಾ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ.ತ್ರಿಪಾಠಿ ಮೋದಿಯವರನ್ನು ಭೇಟಿ ನೀಡಿ ಅರಬ್ಬೀ ಸಮುದ್ರದ ಸಾಗರ ತೀರದ ಪರಿಸ್ಥಿತಿ ಅಲ್ಲಿನ ದೇಶ ಹೇಗೆ ಕಾರ್ಯ ನಿರ್ವಹಿಸಬೇಕು ಎನ್ನುವುದರ ಕುರಿತು ಚರ್ಚೆ ನಡೆಸಿದ್ದರು.
ಪ್ರಧಾನಿ ಮೋದಿ ಅವರು ನೌಕಾಪಡೆ ಮತ್ತು ಭಾರತೀಯ ವಾಯುಪಡೆಯ ಮುಖ್ಯಸ್ಥರು ಮತ್ತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ವೈಯಕ್ತಿಕ ಸಭೆ ಸೇರಿ ಉನ್ನತ ಮಟ್ಟದ ಸಭೆಗಳನ್ನು ನಡೆಸಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಭದ್ರತೆಯ ಪೂರ್ವ ಸಿದ್ಧತೆ ಮತ್ತು ಪಾಕಿಸ್ತಾನದ ವಿರುದ್ಧ ಸಂಭಾವ್ಯ ಪ್ರತೀಕಾರ ಕುರಿತು ಚರ್ಚಿಸಲಾಗಿದೆ. ಇತ್ತೀಚಿಗೆ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಪದೇ ಪದೇ ಕದನ ವಿರಾಮ ಉಲ್ಲಂಘನೆ, ಸಿಂದೂ ನದಿ ನೀರಿನ ಒಪ್ಪಂದದ ಅಮಾನತು , ಸೇನೆ ಮತ್ತು ರಾಜತಾಂತ್ರಿಕ ಕ್ರಮದ ಕುರಿತು ಸಭೆಯಲ್ಲಿ ಮಾಹಿತಿ ಪಡೆದಿದ್ದರು.