ತಾಯಿ ಚಾಮುಂಡೇಶ್ವರಿಗೆ ಡೈಲಾಗ್‌ನಲ್ಲಿ ಅಪಮಾನ ಆರೋಪ | ರಕ್ಷಕ್‌ ಬುಲೆಟ್‌ ವಿರುದ್ಧ ದೂರು ದಾಖಲು

ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ವಿನಯ್ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಸ್ಪರ್ಧಿ ವಿವಾದಕ್ಕೆ ಸಿಲುಕಿದ್ದಾರೆ. ಧಾರ್ಮಿಕ ಭಾವನೆಗೆ ರಕ್ಷಕ್ ಬುಲೆಟ್ ಧಕ್ಕೆಯುಂಟು ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳು ದೂರು ದಾಖಲಿಸಲು ಮುಂದಾಗಿವೆ. ರಿಯಾಲಿಟಿ ಶೋನಲ್ಲಿ ರಕ್ಷಕ್ ಅವರು ತಮ್ಮ ಡೈಲಾಗ್‌ ಮೂಲಕ ತಾಯಿ ಚಾಮುಂಡೇಶ್ವರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಹಿಂದೂ ಸಂಘಟನೆಗಳು ಇಂದು ರಕ್ಷಕ್ ಬುಲೆಟ್‌ ವಿರುದ್ಧ ದೂರು ನೀಡಲು ಸಜ್ಜಾಗಿವೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ರಕ್ಷಕ್‌ ಅವಹೇಳನಕಾರಿಯಾಗಿ ಮಾತನಾಡಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

ರಕ್ಷಕ್ ಬುಲೆಟ್ ವಿರುದ್ಧ ಇಂದು ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದೂರು ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಖಾಸಗಿ ವಾಹಿನಿ ರಿಯಾಲಿಟಿ ಶೋನಲ್ಲಿ ರಕ್ಷಕ್‌ ಬುಲೆಟ್ ಅವರು ಸಹಸ್ಪರ್ಧಿ, ಪಕ್ಕದಲ್ಲಿದ್ದ ಹುಡುಗಿಯನ್ನು ಹೊಗಳುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ರಕ್ಷಕ್ ಬುಲೆಟ್ ಅವರ ಅವಹೇಳನ ವಿಡಿಯೋ ವೈರಲ್ ಆಗಿದ್ದು, ಭಾರೀ ಟೀಕೆ ವ್ಯಕ್ತವಾಗಿದೆ.

ಬಿಗ್ ಬಾಸ್ ಸ್ಪರ್ಧಿಗಳಾದ ರಜತ್, ವಿನಯ್ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಸ್ಪರ್ಧಿ ವಿವಾದಕ್ಕೆ ಸಿಲುಕಿದ್ದಾರೆ. ಧಾರ್ಮಿಕ ಭಾವನೆಗೆ ರಕ್ಷಕ್ ಬುಲೆಟ್ ಧಕ್ಕೆಯುಂಟು ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳು ದೂರು ದಾಖಲಿಸಲು ಮುಂದಾಗಿವೆ. ರಿಯಾಲಿಟಿ ಶೋನಲ್ಲಿ ರಕ್ಷಕ್ ಅವರು ತಮ್ಮ ಡೈಲಾಗ್‌ ಮೂಲಕ ತಾಯಿ ಚಾಮುಂಡೇಶ್ವರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಇದನ್ನೂ ಓದಿ:ರೀಲ್ಸ್ ಮಾಡಿದ ಜಾಗದಲ್ಲಿ ವಿನಯ್‌, ರಜತ್‌ರನ್ನು ಸ್ಥಳ ಮಹಜರಿಗೆ ಕರೆತಂದ ಪೊಲೀಸರು

ಕನ್ನಡದ ಹಿರಿಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ರಿಯಾಲಿಟಿ ಶೋವೊಂದರ ಸ್ಕಿಟ್‌ವೊಂದರಲ್ಲಿ ತಾಯಿ ಚಾಮುಂಡೇಶ್ವರಿ ವಿಚಾರ ಸಂಬಂಧ ಹೇಳಿದ್ದ ಡೈಲಾಗ್ ಒಂದು ವಿವಾದಕ್ಕೆ ಕಾರಣವಾಗಿದೆ. ಇದು ಸೋಷಿಯಲ್ ಮಿಡಿಯಾದಲ್ಲೂ ವಿಡಿಯೋ ಸಖತ್ ವೈರಲ್ ಆಗುತ್ತಿದ್ದು, ಇದು ಹಿಂದೂ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಶೋನಲ್ಲಿ ಸ್ಟೇಜ್ ಮೇಲೆ ರಕ್ಷಕ್ ಬುಲೆಟ್ ಅವರು ಸಹನಟಿಗೆ ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು, ಪ್ಯಾಂಟು ಶರ್ಟು ಹಾಕೊಂಡು ಸ್ವಿಜರ್‌ಲ್ಯಾಂಡ್‌ನಲ್ಲಿ ಟ್ರಿಪ್ ಹೊಡಿತಿದ್ದಾರೆ ಅನ್ನಿಸ್ತಿದೆ ಎಂದು ಡೈಲಾಗ್ ಹೊಡೆದಿದ್ದಾರೆ. ಸಹನಟಿಗೆ ಡೈಲಾಗ್‌ ಮೂಲಕ ಹೊಗಳುವ ಭರದಲ್ಲಿ ರಕ್ಷಕ್‌ ಯಡವಟ್ಟು ಮಾಡಿಕೊಂಡಿದ್ದಾರೆ. ಇದು ಹಿಂದೂ ಹೋರಾಟಗಾರರ ಕೋಪಕ್ಕೆ ಕಾರಣವಾಗಿದೆ.

ಸದ್ಯ ಇದೇ ಕಾರಣಕ್ಕೆ ಕೆರಳಿರೋ ಹಿಂದೂ ಮುಖಂಡರು ರಕ್ಷಕ್ ಬುಲೆಟ್ ವಿರುದ್ಧ ಇಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲು ಮುಂದಾಗಿದ್ದಾರೆ. ಜೊತೆಗೆ ಕೂಡಲೇ ಬಹಿರಂಗ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ತೆರಳಿ ತಪ್ಪು ಕಾಣಿಕೆ ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

 

Author:

...
Sub Editor

ManyaSoft Admin

share
No Reviews