ಮಹಿಳಾ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯ ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂದು ಮುಖಾಮುಖಿ ಆಗಿದ್ದವು. wpl 2025ರ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ ವಿರುದ್ಧ 8 ರನ್ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಎರಡನೇ ಬಾರಿ ಮುಂಬೈ ಇಂಡಿಯನ್ಸ್ ಎರಡನೇ ಬಾರಿ ಐಪಿಎಲ್ ಕಪ್ಗೆ ಮುತ್ತಿಟ್ಟಿತು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು, ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಸ್ಫೋಟಕ ಬ್ಯಾಟಿಂಗ್ (66) ನೆರವಿನೊಂದಿಗೆ, ನಿಗದಿತ 20 ಓವರ್‌ನಲ್ಲಿ 7 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತ್ತು.
ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರು 44 ಎಸೆತಗಳಲ್ಲಿ 66 ರನ್ ಸಿಡಿಸಿ ಗಮನ ಸೆಳೆದರು. ಅದೇ ರೀತಿ ನ್ಯಾಟ್ ಸಿವರ್-ಬ್ರಂಟ್ 28 ಎಸೆತಗಳಲ್ಲಿ 30 ರನ್ ಗಳಿಸಿದರು. ಇನ್ನುಳಿದಂತೆ ಮುಂಬೈ ಇಂಡಿಯನ್ಸ್ ತಂಡದ ಯಾವ ಆಟಗಾರ್ತಿಯೂ ಉತ್ತಮ ಪ್ರದರ್ಶನ ನೀಡಲಿಲ್ಲ.
ಇನ್ನು ಮುಂಬೈ ಇಂಡಿಯನ್ಸ್ ತಂಡ ನೀಡಿದ್ದ 150 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್, ನಿಗದಿತ 20 ಓವರ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಲಷ್ಟೇ ಶಕ್ತವಾಗಯಿತು. ಈ ಮೂಲಕ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ರನ್ಗಳ ರೋಚಕ ಜಯ ಸಾಧಿಸಿತು.
ಫೈನಲ್ನಲ್ಲಿ ರೋಚಕ ಗೆಲುವು ಪಡೆದ ಮುಂಬೈ ಇಂಡಿಯನ್ಸ್ ಆಟಗಾರ್ತಿಯರು ಮೈದಾನದಲ್ಲಿ ಸಂಭ್ರಮಿಸಿದರು. ಕಪ್ ಗೆದ್ದಿದ್ದಕ್ಕೆ ಆಟಗಾರ್ತಿಯರ ಜೊತೆ ನಿತಾ ಅಂಬಾನಿ ಸೇರಿದಂತೆ ಸಿಬ್ಬಂದಿ ವರ್ಗ ಎಲ್ಲರೂ ಎಂಜಾಯ್ ಮಾಡಿ ಖುಷಿ ಪಟ್ಟರು.