ಶಿರಾ : ಕುರಿ ಮೇಕೆ ಖರೀದಿ ಮಾರಾಟಕ್ಕೆ ಮುಗಿಬಿದ್ದ ಮುಸ್ಲಿಂ ಮುಖಂಡರು

ಶಿರಾ : ಬಕ್ರೀದ್‌ ಹಬ್ಬದ ಅಂಗವಾಗಿ ಶಿರಾದಲ್ಲಿ ಮೊಟ್ಟ ಮೊದಲ ಬಾರಿಗೆ ಕುರಿ- ಮೇಕೆ ಮಾರಾಟ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದೆ. ಪಶುಪಾಲನೆ ಮತ್ತು ಪಶು  ವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ- ಮೇಕೆ ಮಾರಾಟ ಮೇಳವನ್ನು ಆಯೋಜನೆ ಮಾಡಲಾಗಿತ್ತು. ಮೇಳಕ್ಕೆ ಶಿರಾ ತಾಲೂಕಿನ ಹಲವು ಭಾಗಗಳಿಂದ ಕುರಿ- ಮೇಕೆಗಳನ್ನು ಮಾರಾಟ ಮಾಡಲು ಹಾಗೂ ಕೊಳ್ಳಲು ಸಾಕಷ್ಟು ಮಂದಿ ಆಗಮಿಸಿದ್ದು, ಭರ್ಜರಿ ವ್ಯಾಪಾರವಾಗಿದೆ.

ಮುಸ್ಲಿಂ ಸಮುದಾಯದವರಿಗೆ ಬಕ್ರೀದ್‌ ಹಬ್ಬ ಇರುವುದರಿಂದ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವ್ಯಾಪಾರ ವಹಿವಾಟು ನಡೆಸಿದರು. ಗ್ರಾಹಕರು ಹಾಗೂ ಸಾರ್ವಜನಿಕರು ಕುರಿ ಮತ್ತು ಮೇಕೆಗಳನ್ನು ಕೊಳ್ಳಲು ಮುಗಿಬಿದ್ದಿರುವ ದೃಶ್ಯ ಸಾಮಾನ್ಯವಾಗಿತ್ತು. ವ್ಯಾಪಾರಸ್ಥರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಇದ್ದುದರಿಂದ  ಯಾವ ಮೂಲೆ ನೋಡಿದರೂ ಮಾರಾಟಗಾರರು ಹಾಗೂ ಕೊಳ್ಳುವವರ ಸಂಖ್ಯೆ ಹೆಚ್ಚಾಗಿದ್ದು, ಖರೀದಿ ಭರಾಟೆ ಜೋರಾಗಿಯೇ ಇತ್ತು. ಕುರಿಗಳು 20 ಸಾವಿರ ರೂಪಾಯಿಯಿಂದ 75 ಸಾವಿರ ರೂಪಾಯಿವರೆಗೂ ಮಾರಾಟವಾದ್ರೆ, ಮೇಕೆಗಳು 25 ಸಾವಿರದಿಂದ 70 ಸಾವಿರ ರೂಪಾಯಿವರೆಗೂ ಮಾರಾಟವಾಯಿತು.

ಮುಸ್ಲಿಂ ಸಮುದಾಯದವರು ಬಕ್ರೀದ್‌ ಹಬ್ಬದ ಅಂಗವಾಗಿ ಮಾಂಸ ಸೇರಿದಂತೆ ಆಹಾರ ಪದಾರ್ಥಗಳನ್ನು ದಾನ ಮಾಡೋದು ಸಂಪ್ರದಾಯದಂತೆ ಬೆಳೆದುಕೊಂಡು ಬಂದಿದೆ. ಅದರಂತೆ ಈ ವರ್ಷವೂ ಮುಸ್ಲಿಂ ಸಮುದಾಯದ ಮುಖಂಡರು ದಾನಕ್ಕಾಗಿ ಕುರಿ- ಮೇಕೆ ಖರೀದಿಗೆ ಮುಗಿಬಿದ್ದ ದೃಶ್ಯಗಳು ಕಂಡು ಬಂದಿತು.

Author:

...
Sushmitha N

Copy Editor

prajashakthi tv

share
No Reviews