ಮೈಸೂರು : ಮೈಸೂರು ತಾಲ್ಲೂಕಿನ ಬೋರೆ ಆನಂದೂರು ಗ್ರಾಮದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮೂರು ಮನೆಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಅದೃಷ್ಟವಶಾತ್ ಈ ಬೆಂಕಿ ಅವಘಡ ಸಂಭವಿಸಿದ ವೇಳೆ ಮನೆಯಲ್ಲಿ ಯಾರೂ ಇರದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗ್ರಾಮದ ಶನಿವಾರೇಗೌಡ, ಶ್ರೀನಿವಾಸೇ ಗೌಡ ಹಾಗೂ ವೆಂಕಟೇಶೇ ಗೌಡ ಎಂಬುವವರಿಗೆ ಸೇರಿದ ಮನೆಗಳಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಮೂರು ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇನ್ನು ಬೆಂಕಿಯ ಕೆನ್ನಾಲಗೆಗೆ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ.
ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದು, ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ, ಆದರೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗ್ತಿದೆ.