ನಟ ದರ್ಶನ್ಮೈಸೂರು
ಮೈಸೂರು: ಇಂದು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ರವರು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬದ ಜೊತೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇತ್ತೀಚೆಗೆ ದರ್ಶನ್ ಅವರು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ತಮ್ಮ ಆರೋಗ್ಯ ಬಹುಬೇಗ ಸುಧಾರಿಸಿ ಎಲ್ಲಾ ಸಮಸ್ಯೆಗಳು ದೂರವಾಗಲೆಂದು ತಾಯಿ ಚಾಮುಂಡಿಗೆ ದರ್ಶನ್ ಬೇಡಿಕೊಂಡಿದ್ದಾರೆ.
ಜಾಮೀನು ಸಿಕ್ಕ ಬಳಿಕ ದರ್ಶನ್ ಅವರು ಕುಟುಂಬದ ಜೊತೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಜೈಲಿನಿಂದ ಹೊರ ಬಂದ ಬಳಿಕ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ ದೇವಸ್ಥಾನಗಳಿಗೆ ಭೇಟಿ ನೀಡಲು ಶುರು ಮಾಡಿದ್ದು.ಕೊಲೆ ಆರೋಪದ ಸಂಕಷ್ಟದಿಂದ ಪಾರಾಗಲು ದೇವರ ಮೊರೆ ಹೋಗಿದ್ದಾರೆ.
ಅನಾರೋಗ್ಯದ ನಡುವೆಯೇ ಡೆವಿಲ್ ಸಿನಿಮಾದ ಡಬ್ಬಿಂಗ್ ಮುಗಿಸಿದ ದಾಸ ಈಗ ಶೂಟಿಂಗ್ ಸೆಟ್ಗೆ ಹೋಗಲು ಸಿದ್ಧರಾಗುತ್ತಿದ್ದಾರೆ. ಅರ್ಧಕ್ಕೆ ನಿಂತ ಸಿನಿಮಾವನ್ನು ಪೂರ್ಣಗೊಳಿಸಲು ದರ್ಶನ್ ಮಾನಸಿಕವಾಗಿ ದೈಹಿಕವಾಗಿ ಶಕ್ತಿ ನೀಡಲೆಂದು ದೇವರ ಮೊರೆ ಹೋಗಿದ್ದಾರೆ. ತಮ್ಮ ಎಲ್ಲಾ ಆರೋಗ್ಯ ಸಮಸ್ಯೆಗಳು ದೂರವಾಗಲೆಂದು ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ತೆರಳಿ ಇಂದು ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಭಿಮಾನಿಗಳ ದಂಡು ಸೇರಿರುವುದು ಕಂಡು ಬಂದಿದೆ.