ಮೈಸೂರು:
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಕಲ್ಲು ತೂರಾಟ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ಎಫ್ ಐಆರ್ ದಾಖಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯೊಬ್ಬ ಮಾಡಿದ್ದ ಪೋಸ್ಟ್ ವೊಂದು ಒಂದು ಸಮುದಾಯವನ್ನು ಕೆರಳಿಸಿತ್ತು. ಬಳಿಕ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದರು. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿದ ದೂರಿನ ಅನ್ವಯ ಎಫ್ ಐಆರ್ ದಾಖಲಾಗಿದೆ. ಫೆ.10 ರಂದು ನಡೆದ ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡುವಾಗ ಮುಸ್ಲಿಮರ ಬಗ್ಗೆ ಪ್ರತಾಪ್ ಸಿಂಹ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.