ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ..!

ಮೈಸೂರು ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿರುವುದು.
ಮೈಸೂರು ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿರುವುದು.
ಮೈಸೂರು

ಮೈಸೂರು:

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿಬೆಂಕಿ ಅವಘಡ ಸಂಭವಿಸಿದೆ. ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಯ ಕೆನ್ನಾಲಿಗೆಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡಲಾಗುತ್ತಿದೆ. ಮೈಸೂರಿನ ಉತ್ತರಹಳ್ಳಿ ಮಾರ್ಗವಾಗಿ ಹೋಗುವ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ದೊಡ್ಡ ಹೊಗೆ ಆವರಿಸಿದೆ.

ಬಿರು ಬೇಸಿಗೆಯ ಧಗೆಯ ನಡೆವೆ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕೆನ್ನಾಲಿಗೆಗೆ ಗಿಡ-ಮರಗಳು ಸುಟ್ಟು ಕರಕಲಾಗಿವೆ. ಬೆಟ್ಟದ ಸುತ್ತ ನೂರಾರು ಎಕರೆಗೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ ಹರಸಾಹಸ ಪಡುತ್ತಿದೆ. ಬೆಂಕಿ ಹಿನ್ನೆಲೆ ಸಾರ್ವಜನಿಕರಿಗೆ ಉತ್ತನಹಳ್ಳಿ ರಸ್ತೆ ಬಂದ್ ಮಾಡಲಾಗಿದೆ. ಬೆಂಕಿ ನಿಯಂತ್ರಣಕ್ಕೆ ಸಿಗದಿರುವ ಹಿನ್ನೆಲೆಯಲ್ಲಿ ಭಾರೀ ಆತಂಕ ಎದುರಾಗಿದೆ.

Author:

...
Editor

ManyaSoft Admin

Ads in Post
share
No Reviews