ನಾಗಮಂಗಲ : ಮಂಡ್ಯದ ನಾಗಮಂಗಲ ತಾಲ್ಲೂಕಿನ ತೊಳಲಿ ಗ್ರಾಮದ ಕೆರೆಯ ಬಳಿ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಗೆ ಟ್ರಾಕ್ಟರ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮುಳುಕಟ್ಟೆ ಗ್ರಾಮದ ನಿವಾಸಿ ಶಶಿಕಾಂತ್ ಅಲಿಯಾಸ್ ಮಹೇಶ್ (37) ಮೃತ ದುರ್ದೈವಿಯಾಗಿದ್ದಾನೆ.
ಬೈಕ್‌ನಲ್ಲಿ ಮರ ತುಂಬಿಸಿಕೊಂಡು ಹೋಗುತ್ತಿದ್ದಾಗ, ಎದುರಿನಿಂದ ಬಂದ ಟ್ರಾಕ್ಟರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಈ ಅಪಘಾತ ಸಂಭವಿಸಿದ್ದು, ಡಿಕ್ಕಿ ಹೊಡೆದ ಪರಿಣಾಮ ಮಹೇಶ್ ಎಂಬಾತ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿಯಲ್ಲಿ ಕುಳಿತಿದ್ದ ಅರುಣ್ ಕುಮಾರ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಳಿಕ ಟ್ರಾಕ್ಟರ್ ಚಾಲಕ ತನ್ನ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದು. ಘಟನಾ ಸ್ಥಳಕ್ಕೆ ನಾಗಮಂಗಲ ಪಟ್ಟಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.