ನೆಲಮಂಗಲ :
ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಅಂಚೆಮನೆ ಕ್ರಾಸ್ ಬಳಿ ನಡೆದಿದೆ. ಮಲ್ಲೇಶ್ವರಂ ಮೂಲದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಬೆಂಗಳೂರಿನಿಂದ ತುಮಕೂರಿಗೆ ನಾಮಕರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮತ್ತೋರ್ವ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಇನ್ನು ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.