ರಾಷ್ಟ್ರೀಯ ಹೆದ್ದಾರಿ- 48 ರ ಸರಣಿ ಅಪಘಾತತುಮಕೂರು
ನೆಲಮಂಗಲ :
ಬೆಳ್ಳಂ ಬೆಳಗ್ಗೆ ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ- 48 ರ ಗುಂಡೇನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ, ಆದ್ರೆ ಕಾರು ಲಾರಿ ಕೆಳಗೆ ನಜ್ಜುಗುಜ್ಜಾದರೂ ಅದೃಷ್ಟವಶಾತ್ ಪವಾಡ ಎಂಬಂತೆ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಬಳಿ ಸ್ವಿಫ್ಟ್ ಕಾರು, ಲಾರಿ ಹಾಗೂ ಟೂರಿಸ್ಟ್ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ . ಮೊದಲು ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಲಾರಿ ಕೆಳಗೆ ಕಾರು ಸಿಲುಕಿದ್ದು , ನಂತರ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ . ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದ್ದು , ಕಾರಿನ ಚಾಲಕನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ . ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿರುವುದು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.