ಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ಉತ್ಪಾದನಾ ಘಟಕ ಆರಂಭಿಸಲು ಮುಂದಾಗಿದೆ.
ಎಮ್ವಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ 15,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. ಇದರಿಂದ ಈ ಬಾಗದಲ್ಲಿ 10 ಸಾವಿರ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರು ಗುರುವಾರ ಹೇಳಿದರು.
ಕಂಪನಿಯು ಮೊದಲ ಹಂತದಲ್ಲಿ 5,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. 5 ಗಿಗಾವ್ಯಾಟ್ ಸಾಮರ್ಥ್ಯದ ಉತ್ಪಾದನೆ ಮಾಡಲಿದೆ. ಒಟ್ಟು ಯೋಜನೆಯಿಂದ 10 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಎಮ್ವಿ ಎನರ್ಜಿ ಕಂಪನಿಯು ಬೆಂಗಳೂರಿನ ಐಟಿಐಆರ್ ವಲಯದಲ್ಲಿ 120 ಎಕರೆ ಜಮೀನನ್ನು ಕೇಳಿದೆ. ಇದನ್ನು ಸಕಾರಾತ್ಮಕವಾಗಿ ಪರಿಶೀಲಿಸಿ, ಒದಗಿಸಲಾಗುವುದು ಎಂದು ಸಚಿವರು ನಿಯೋಗಕ್ಕೆ ಭರವಸೆ ನೀಡಿದರು.
₹315 ಕೋಟಿ ರೂಪಾಯಿಗಳ ಹೂಡಿಕೆ ಇನ್ನೂ ಕೋಲಾರ ಜಿಲ್ಲೆ ವೇಮಗಲ್ನಲ್ಲಿ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣಕ್ಕೆ ಮುಂದಾಗಿದೆ. ₹315 ಕೋಟಿ ರೂಪಾಯಿಗಳ ಹೂಡಿಕೆ ಇದಾಗಿದೆ. ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಕಂಪನಿ ನಿರ್ಮಿಸಲಿರುವ ಉದ್ದೇಶಿಸಿರುವ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅಡಿಗಲ್ಲು ಪೂಜೆ ನೆರವೇರಿಸಿದ್ದಾರೆ.