ಮೈಸೂರು : ಬೇಲಿಯಲ್ಲಿ ನವಜಾತ ಶಿಶು ಪತ್ತೆ |

ಮೈಸೂರು:

ರಾಜ್ಯದಲ್ಲೋಂದು ಅಮಾನವೀಯ ಘಟನೆ ನಡೆದಿದೆ, ಹೌದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಂಗಳೂರು ಮಾಳ ಹಾಡಿ ಗ್ರಾಮದಲ್ಲಿ ಬೇಲಿ ಒಳಗೆ ತಾಯಿಗೆ ಬೇಡವಾದ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮಗುವಿನ ಅಳು ಶಬ್ದ ಕೇಳಿಸಿಕೊಂಡು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದು, ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ, ಇನ್ನು ಪೊಲೀಸರು ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗೆ ಕೂಡ ಮಾಹಿತಿ ನೀಡಲಾಗಿದೆ. ಸದ್ಯ ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author:

share
No Reviews