NEWDELHI: ಭಾರತದಲ್ಲಿ ಕೋವಿಡ್-19 ಹರಡುವಿಕೆ ಮತ್ತೆ ಹೆಚ್ಚಳವಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7 ಸಾವಿರಕ್ಕೆ ಸಮೀಪಿಸಿದೆ. ಕಳೆದ 24 ಗಂಟೆಗಳಲ್ಲಿ 300 ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 68ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ 559 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಸದ್ಯ ದೇಶದಾದ್ಯಂತ ಸಕ್ರಿಯ ಪ್ರಕರಣಗಳ ಸಂಖ್ಯೆ 6,815 ಕ್ಕೆ ಏರಿಕೆ ಆಗಿದ್ದು, ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ, ಐಸೋಲೇಷನ್ ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಇತರ ಅಗತ್ಯ ಔಷಧಿಗಳನ್ನು ಲಭ್ಯವಾಗುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಒಮಿಕ್ರಾನ್ ಮತ್ತು ಅದರ ಉಪ-ರೂಪಾಂತರಗಳು NB1.8.1 ಕಾರಣ ಪ್ರಕರಣಗಳ ಹೆಚ್ಚಳ. XFG ರೂಪಾಂತರದ ಇತ್ತೀಚಿನ ಪ್ರಕರಣಗಳು ವರದಿಯಾಗುತ್ತಿವೆ. ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ದತ್ತಾಂಶದ ಪ್ರಕಾರ, ದೇಶದಲ್ಲಿ ಈ ರೂಪಾಂತರದ 163 ಪ್ರಕರಣಗಳು ದಾಖಲಾಗಿವೆ..