Newdelhi : ಸೋನಿಯಾ ಗಾಂಧಿ ಆರೋಗ್ಯದಲ್ಲಿ ದಿಢೀರ್ ಏರುಪೇರು | ಖಾಸಗಿ ಆಸ್ಪತ್ರೆಗೆ ದಾಖಲು

NEWDELHI: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಸಂಭವಿಸಿದ್ದು, ಅವರನ್ನು ತಕ್ಷಣವೇ ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗೆ ಸೋನಿಯಾ ಗಾಂಧಿ ಅವರ ಆರೋಗ್ಯ ಪದೇಪದೇ ಏರುಪೇರು ಆಗುತ್ತಿದೆ. ಕಳೆದ ವಾರವಷ್ಟೇ ಶಿಮ್ಲಾದಲ್ಲಿ ತೀವ್ರ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಕೆಲ ದಿನಗಳ ಹಿಂದೆ ಡಿಸ್ಚಾರ್ಜ್ ಆಗಿದ್ದರು.

ಸೋನಿಯಾ ಗಾಂಧಿ ಅವರಿಗೆ ಈಗ 78 ವರ್ಷ ವಯಸ್ಸು. ಹೀಗಾಗಿ ಅವರು ವಯೋ ಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಅದಕ್ಕೆ ನಿಯಮಿತ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಹೀಗಿದ್ದಾಗಲೇ ನಿನ್ನೆ ಮತ್ತೇ ಹೊಟ್ಟೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಯನ್ನ ಎದುರಿಸುತ್ತಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈ ಸುದ್ದಿ ಇದೀಗ ಸಂಚಲನ ಸೃಷ್ಟಿ ಮಾಡಿದ್ದು, ಬೆಂಬಲಿಗರು ಹಾಗೂ ಕಾಂಗ್ರೆಸ್ ವರಿಷ್ಠರು ಆಸ್ಪತ್ರೆಗೆ ದೌಡಾಯಿಸಿ ಆರೋಗ್ಯ ವಿಚಾರಿಸುತ್ತಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews