ರಾಮನಗರ : ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಮೈಸೂರು ಸ್ಯಾಂಡಲ್ ಸೋಪ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟಿ ತಮನ್ನಾ ಭಾಟಿಯಾ ನೇಮಕಗೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದಿಂದ 6.20 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ವರ್ಷಗಳ ಒಪ್ಪಂದದಲ್ಲಿ ನಡೆದಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ .
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮನ್ನಾ ಬೇಡ, ಸುಮನ್ನಾ ಬೇಡ, ನಾನೇ ರಾಯಭಾರಿ ಆಗ್ತೀನಿ ಎಂದು ಅವರು ಹೇಳಿದ್ದು, ಕನ್ನಡಿಗರ ಪರವಾಗಿ ನಿಲ್ಲುವ ಮೂಲಕ ಕನ್ನಡಿಗರ ಹಕ್ಕುಗಳನ್ನು ರಕ್ಷಿಸುವುದಾಗಿ ಹೇಳಿದ್ದಾರೆ. ಅವರು, ತಮಿಳು, ತೆಲುಗಿನವರು ಯಾರೂ ಬೇಡ. ಶ್ರೀಗಂಧ, ಮೈಸೂರು ಇವೆರಡೂ ಸಹ ಪ್ರಪಂಚದಲ್ಲೇ ಬ್ರಾಂಡ್ ಎಂದು ಹೇಳಿದ್ದಾರೆ, ಮತ್ತು ಸಿಎಂ, ಡಿಸಿಎಂ, ಸೇರಿದಂತೆ ರಾಜ್ಯದ ಎಲ್ಲಾ ಮಂತ್ರಿಗಳು, ಶಾಸಕರು, ಸರ್ಕಾರಿ ಅಧಿಕಾರಿಗಳು ಸ್ಯಾಂಡಲ್ ಸೋಪಿನಲ್ಲಿ ಸ್ನಾನ ಮಾಡಲಿ ಎಂದು ಸೂಚಿಸಿದ್ದಾರೆ.
ಈ ವಿಷಯದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಕನ್ನಡಿಗರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. "ನಮ್ಮಲ್ಲಿ ರಶ್ಮಿಕಾ ಮಂಡಣ್ಣಾ, ರುಕ್ಮಿಣಿ ವಾಸಂತ್, ಶ್ರೀನಿಧಿ ಶೆಟ್ಟಿ ಇದ್ದರೂ ತಮನ್ನಾ ಭಾಟಿಯಾ ಏಕೆ?" ಎಂದು ಪ್ರಶ್ನಿಸಿದ್ದಾರೆ.
ತಮನ್ನಾಗೆ 6.20 ಕೋಟಿ ರೂ. ಕೊಟ್ಟಿರೋದರಲ್ಲಿ ದೊಡ್ಡ ರಾಜಕೀಯ ಇದೆ. ಸಿಕ್ಕಸಿಕ್ಕವರಿಗೆ ಕೋಟಿ ಕೋಟಿ ಕೊಟ್ರೆ ನಾಳೆ ಕಾರ್ಖಾನೆ ಮುಚ್ಚಬೇಕಾಗುತ್ತೆ. ಸ್ಯಾಂಡಲ್ ಸೋಪ್ ಕನ್ನಡಿಗರ ಸೋಪ್. ಎಲ್ಲರೂ ಸ್ಯಾಂಡಲ್ ಸೋಪ್ ಬಳಸಿ, ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ ಅಂತ ವಾಟಾಳ್ ಹೇಳಿದ್ದಾರೆ.