ಶಿರಾ : ಶಿರಾ ರಾಗಿ ಖರೀದಿ ಕೇಂದ್ರಕ್ಕೆ ನೋಡಲ್ ಅಧಿಕಾರಿ ಭೇಟಿ..!

ರಾಗಿ ಖರೀದಿ ಕೇಂದ್ರ
ರಾಗಿ ಖರೀದಿ ಕೇಂದ್ರ
ತುಮಕೂರು

ಶಿರಾ:

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತುಮಕೂರು ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಶಿರಾ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿಯೂ ರಾಗಿ ಖರೀದಿ ಕೇಂದ್ರವನ್ನು ತೆರೆಯಲಾಗಿದ್ದು, ನೋಡಲ್‌ ಅಧಿಕಾರಿಯಾಗಿರುವ ಪಶುಪಾಲನಾ ಇಲಾಖೆಯ ಆಡಳಿತ ವಿಭಾಗದ ಉಪ ನಿರ್ದೇಶಕ ಡಾ.ಗಿರೀಶ್ ಬಾಬು ರೆಡ್ಡಿ ಈ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿರಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಖರೀದಿ ಕೇಂದ್ರವನ್ನು ತೆರೆದಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೊಂದಾಯಿಸಿ ಸರ್ಕಾರದ ಸೌಲಭ್ಯ ಸದುಪಯೋಗ ಮಾಡಿಕೊಳ್ಳಬೇಕು ಅಂತಾ ತಿಳಿಸಿದರು. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ವತಿಯಿಂದ ರಾಗಿಯನ್ನು ಖರೀದಿಸಲಾಗ್ತಿದ್ದು, ಖರೀದಿಯ ಮಾನದಂಡಗಳ ಅನ್ವಯ ಎಫ್‌ಎಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋಜಿಸುವಂತೆ ಹಾಗೂ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರಬೇಕು. ಒಂದು ವೇಳೆ ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಮಾರಾಟ ಮಾಡಬಹುದಾಗಿದೆ. ಮಾರಾಟ ಮಾಡಿದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ಪ್ರೂಟ್ಸ್ ಐಡಿ ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರವನ್ನು ರೈತರು ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಶಿರಾ ಎಪಿಎಂಸಿ ಮಾರುಕಟ್ಟೆ ಕಾರ್ಯದರ್ಶಿ ಅನುರಾಧ, ಶಿರಾ ಪಶುಪಾಲನೆಯ ಉಪ ನಿರ್ದೇಶಕ ಡಾ.ರಮೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು.

Author:

...
Editor

ManyaSoft Admin

share
No Reviews