ನಾಗವಲ್ಲಿ : ರಸ್ತೆಯಲ್ಲಿ ನಿಂತಿದ್ದ ಕ್ಯಾಂಟರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಗ್ರಾಮಾಂತರದ ನಾಗವಲ್ಲಿಯಲ್ಲಿ ನಡೆದಿದೆ.
ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯ ನಾಗವಲ್ಲಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಕುಣಿಗಲ್ ಕಡೆಯಿಂದ ಬರುತ್ತಿದ್ದ ಕಾರು ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕ್ಯಾಂಟರ್ ಲಾರಿಗೆ ಡಿಕ್ಕಿ ಹೊಡೆದಿದೆ, ಪರಿಣಾಮ 36 ವರ್ಷದ ಏಜೆಜ್ ಶೇಕ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 40 ವರ್ಷದ ಅಜ್ಮತ್ ಮುಲ್ಲಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನು ಅಜ್ಮತ್ ಮುಲ್ಲಾ ಮಾವಿನ ಮಂಡಿಯಲ್ಲಿ ವ್ಯಾಪಾರಿಯಾಗಿದ್ದು, ತುಮಕೂರಿನ ವೀರಸಾಗದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಅಜ್ಮತ್‌ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿದ್ದೆಯ ಮಂಪರಿನಲ್ಲಿದ್ದದ್ದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಹೆಬ್ಬೂರು ಪಿಎಸ್ಐ ಬೈರೇಗೌಡ ಹಾಗೂ ಎಎಸ್ ಐ ಶ್ರೀನಿವಾಸ್, ಸಿಬ್ಬಂದಿಗಳಾದ ರಾಕೇಶ್. ರಾಥೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.