ಬೆಂಗಳೂರು : ಗಾಂಧಿನಗರದಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್‌

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಮತ್ತೊಮ್ಮೆ ಚಿಂತೆಯ ಎಚ್ಚರಿಕೆಗೆ ಕಾರಣವಾಗಿದೆ. ಬೆಂಗಳುರಿನ ಗಾಂದಿನಗರದಲ್ಲಿ 46 ವರ್ಷದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಯಾವ ಟ್ರಾವೆಲ್ ಹಿಸ್ಟರಿ ಇಲ್ಲದಿದ್ದರೂ ಸೋಂಕು ದೃಢಪಟ್ಟಿದೆ. ಸದ್ಯ ಅವರು ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೇ 25 ಮತ್ತು 26ರ ನಡುವಿನ ಪಾಸಿಟಿವ್ ದರದಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಮೇ 25ರಂದು 8.65% ಇದ್ದ ಪಾಸಿಟಿವ್ ದರ, ಇಂದಿಗೆ 19.37%ಕ್ಕೆ ಏರಿದೆ. ಸೋಮವಾರ ನಡೆದ 191 ಟೆಸ್ಟಿಂಗ್‌ನಲ್ಲಿ 37 ಮಂದಿಗೆ ಸೋಂಕು ದೃಢವಾಗಿದ್ದು, ಜೊತೆಗೆ 171 RT-PCR ಟೆಸ್ಟ್‌ಗಳಲ್ಲಿ ಹಲವಾರು ಪಾಸಿಟಿವ್‌ಗಳು ಕಂಡುಬಂದಿವೆ.

ಮೇ 26ರ ಜಿಲ್ಲಾವಾರು ಮಾಹಿತಿ ಪ್ರಕಾರ, ಬೆಂಗಳೂರು 73, ಬೆಂಗಳೂರು ಗ್ರಾಮಾಂತರ 2, ಮೈಸೂರು 3, ವಿಜಯನಗರ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ ಒಂದೊಂದು ಕೋವಿಡ್‌ ಸಕ್ರಿಯ ಪ್ರಕರಣಗಳು ವರದಿಯಾಗಿದೆ. ನೆನ್ನೆ ಸರ್ಕಾರ ನಡೆಸಿದ ಸಭೆಯಲ್ಲಿ, ಯಾವುದೇ ತ್ವರಿತ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಸೂಚನೆ ನೀಡಲಾಗಿದ್ದು, ನಗರದ ಮಾಲ್‌ಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಕುರಿತ ತೀರ್ಮಾನಿಸುವ ಸಾಧ್ಯತೆಯಿದೆ. 

Author:

...
Keerthana J

Copy Editor

prajashakthi tv

share
No Reviews