ತುಮಕೂರು : ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನ ಸಭಾಂಗಣ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿತು. ರಾಜ್ಯದ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗೃಹಸಚಿವ ಡಾ.ಜಿ ಪರಮೇಶ್ವರ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ವೆಂಕಟ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಕಾರ್ಯಕ್ರಮದ ವೇಳೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 2ನೇ ಹಂತದಲ್ಲಿ ನೇಮಕವಾಗಿರುವ 15 ಜನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಯಿತು. ಈ ವೇಳೆ ಹೊಸದಾಗಿ ನೇಮಕಗೊಂಡ ಅಧಿಕಾರಿಗಳಿಗೆ ಗೃಹಸಚಿವರು ಅಭಿನಂದನೆ ತಿಳಿಸಿ, ಗ್ರಾಮೀಣ ಅಭಿವೃದ್ಧಿಗೆ ಶ್ರದ್ದೆಯಿಂದ ಕೆಲಸ ಮಾಡುವಂತೆ ಕರೆ ನೀಡಿದರು.