ಪಾವಗಡ : ಖುಷಿ ಖುಷಿಯಿಂದ ಪರೀಕ್ಷೆಗೆ ಹಾಜರಾದ ಪಾವಗಡದ ಮಕ್ಕಳು

ಪಾವಗಡ : 

ರಾಜ್ಯಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಆರಂಭವಾಗಿದೆ, ಪಾವಗಡ ತಾಲೂಕಿನಾದ್ಯಂತ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 2850 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ, ಅಲ್ಲದೇ ಕಳೆದ ವರ್ಷ ಫೇಲಾಗಿದ್ದ 75 ವಿದ್ಯಾರ್ಥಿಗಳು ಮರುಪರೀಕ್ಷೆಯನ್ನು ಬರೆಯುತ್ತಿದ್ದಾರೆ. ವರ್ಷವಿಡೀ ಅಭ್ಯಾಸ ನಡೆಸಿರುವ ವಿದ್ಯಾರ್ಥಿಗಳು ಇವತ್ತಿನಿಂದ ಪರೀಕ್ಷೆ ಬರೆಯುತ್ತಿದ್ದು, ಪ್ರಜಾಶಕ್ತಿ ಟಿವಿಯ ಜೊತೆ ಸಂತಸವನ್ನು ಹಂಚಿಕೊಂಡರು.

ಇನ್ನು ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ನಕಲು ನಡೆಯಬಾರದು ಅನ್ನೋ ಕಾರಣಕ್ಕೆ ಪ್ರತಿಯೊಂದು ಪರೀಕ್ಷಾ ಕೊಠಡಿಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಿಸಿಟಿವಿ ಕಣ್ಗಾವಲಿನ ಮೂಲಕ ನೇರ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ, ವಿದ್ಯುತ್‌ ದ್ವೀಪಗಳ ವ್ಯವಸ್ಥೆ ಮಾಡಲಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಈ ಬಾರಿ ತಾಲೂಕಿನಲ್ಲಿ ಉತ್ತಮ ಫಲಿತಾಂಶ ಬರುವ ನೀರಿಕ್ಷೆ ಹೊಂದಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಇದರ ಜೊತೆಗೆ ಜಿಲ್ಲಾ ಕ್ಷಿಪ್ರ ಪಡೆಗಳನ್ನು ನಿಯೋಜಿಸಲಾಗಿದೆ, ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಸಮನ್ವಯದಲ್ಲಿ ಪರೀಕ್ಷೆಗಳ ನಿರ್ವಹಣೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಅನಗತ್ಯ ಜನಸಂದಣಿ, ಪೋಷಕರು ಅಥವಾ ಅತಿಥಿಗಳ ಪ್ರವೇಶ, ಮತ್ತು ಮೊಬೈಲ್ ಬಳಕೆಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.

Author:

...
Editor

ManyaSoft Admin

share
No Reviews