ಪಾವಗಡ: . ಬೈಕ್ ಹಾಗೂ ಆಟೋ ನಡುವೆ ಅಪಘಾತ | ಸ್ಥಳದಲ್ಲೇ ಓರ್ವ ಸಾವು..!

ಮೃತ ಯುವಕ ಚರಣ್‌ (18)
ಮೃತ ಯುವಕ ಚರಣ್‌ (18)
ತುಮಕೂರು

ಪಾವಗಡ:

ಬೈಕ್‌ ಹಾಗೂ ಲಗೇಜ್‌ ಆಟೋ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೊಮ್ಮತಮರಿ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ಬೈಕ್ನಲ್ಲಿದ್ದ 18 ವರ್ಷದ ಚರಣ್‌ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಂದ್ರಪ್ರದೇಶದ ರೆಡ್ಡಿಪಲ್ಲಿಯಿಂದ ಲೇಪಾಕ್ಷಿಗೆ ಬೈಕನಲ್ಲಿ ಮೂವರು ಸ್ನೇಹಿತರು ತೆರಳುವಾಗ‌ ಬೈಕ್‌ ಗೆ ಎದುರುಗಡೆಯಿಂದ ಬರುತ್ತಿದ್ದ ಲಗೇಜ್‌ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಟನೆಯಲ್ಲಿ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತದ ಬಳಿಕ ಲಗೇಜ್‌ ಆಟೋ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

ಪಾವಗಡ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪಾವಗಡ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author:

share
No Reviews